ಇಂದಿರಾ ಗಾಂಧಿಯನ್ನು ಹಿಟ್ಲರ್‌ಗೆ ಹೋಲಿಸಿ ಆಕ್ಷೇಪಾರ್ಹ ಪೋಸ್ಟರ್: ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್

0
444

ಸನ್ಮಾರ್ಗ ವಾರ್ತೆ

ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರನ್ನು ನಾಜಿ ನಾಯಕ ಹಿಟ್ಲರ್‌ಗೆ ಹೋಲಿಸಿ ಪೋಸ್ಟ್ ಮಾಡಲಾದ, ಬಿಜೆಪಿ ಸಾಮಾಜಿಕ ಮಾಧ್ಯಮ ಪೋಸ್ಟರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಈ ಸಂಬಂಧ ಕರ್ನಾಟಕ ಕಾಂಗ್ರೆಸ್ ಘಟಕ ನೀಡಿದ ದೂರಿನ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಐಟಿ ಸೆಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಘಟನೆಯ ಕುರಿತು ಗುರುವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಸಾಮಾಜಿಕ ಮಾಧ್ಯಮದಲ್ಲಿ ಹಂಚಿದ ಪೋಸ್ಟ್‌ನಲ್ಲಿ ದಿವಂಗತ ಪ್ರಧಾನಿಗೆ ಆಕ್ಷೇಪಾರ್ಹ ಹಾಗೂ ಅವಮಾನಕಾರಕ ಭಾಷೆ ಬಳಕೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಪ್ರಕರಣವನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 192 (ತಪ್ಪು ದಾಖಲೆ ನೀಡುವುದು) ಮತ್ತು ಸೆಕ್ಷನ್ 353 (ಸರ್ಕಾರಿ ನೌಕರರ ಕೆಲಸಕ್ಕೆ ತಡೆ ನೀಡುವುದು) ಅಡಿಯಲ್ಲಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.