ಏರ್ ಇಂಡಿಯಾ ಅಪಘಾತದಲ್ಲಿ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸಾವು ದೃಢ: ಡಿಎನ್ಎ ಮೂಲಕ ಪತ್ತೆ – 270 ಮೃತದೇಹಗಳಲ್ಲಿ 33 ಹಸ್ತಾಂತರ

0
497

ಸನ್ಮಾರ್ಗ ವಾರ್ತೆ

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಗುರುತನ್ನು ಡಿಎನ್ಎ ಪರೀಕ್ಷೆ ಮೂಲಕ ದೃಢಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಅಪಘಾತದಲ್ಲಿ ಮೃತಪಟ್ಟ 270 ಜನರ ಮೃತದೇಹಗಳನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ತರಲಾಗಿದೆ. ಇವರಲ್ಲಿ 33 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಹೆಚ್ಚುವರಿ ಸಿವಿಲ್ ಸೂಪರಿಂಟೆಂಡೆಂಟ್ ಡಾ. ರಜನೀಶ್ ಪಟೇಲ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ರೂಪಾನಿ ಅವರ ಕುಟುಂಬವನ್ನು ಭೇಟಿಯಾಗಿ ಸಂತಾಪ ಸೂಚಿಸಿದ್ದಾರೆ ಎಂದು ಆರೋಗ್ಯ ಸಚಿವ ಹೃಷಿಕೇಶ್ ಪಟೇಲ್ ತಿಳಿಸಿದ್ದಾರೆ.

ಅಪಘಾತದ ಹಿನ್ನೆಲೆಯನ್ನು ಪತ್ತೆಹಚ್ಚಲು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸೇರಿದಂತೆ ಹಲವು ಸಂಸ್ಥೆಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಗೃಹ ಕಾರ್ಯದರ್ಶಿ ನೇತೃತ್ವದಲ್ಲಿ ಕೇಂದ್ರವು ರಚಿಸಿರುವ ಉನ್ನತ ಮಟ್ಟದ ಸಮಿತಿ, ಈ ದುರ್ಘಟನೆಯ ಸಮಗ್ರ ಪರಿಶೀಲನೆ ನಡೆಸಿ ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಲಿದೆ.