ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀಗೆ ಸೇರಿದ ಕಾರು ಅಪಘಾತ: ಇಬ್ಬರು ಮೃತ್ಯು

0
584

ಸನ್ಮಾರ್ಗ ವಾರ್ತೆ

ಹುಬ್ಬಳ್ಳಿ, ನ.21: ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಶುಕ್ರವಾರ ತಡರಾತ್ರಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ಘಟನೆಯಲ್ಲಿ ಒಂದು ಕಾರು ಕನ್ನಡ ಚಿತ್ರರಂಗದ ಹಿರಿಯ ನಟಿ, ಮಾಜಿ ಸಚಿವೆ ಉಮಾಶ್ರೀಗೆ ಸೇರಿದ್ದು‌ ಎಂದು ತಿಳಿದು ಬಂದಿದೆ.

ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿದ್ದ ಬಲೆನೋ ಕಾರು, ಗದಗದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಇನ್ನೋವಾ ಕಾರು ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೊಬ್ಬ ಕಾರಿನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಬಳ್ಳಾರಿಗೆ ಹೊರಟಿದ್ದ ಕಾರು, ಗದಗದಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಳ್ಳಾರಿಗೆ ಹೊರಟ್ಟಿದ್ದವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಗಾಯಾಳು ಮತ್ತು ಮೃತರ ಪತ್ತೆ ಹಚ್ಚಲು ಕ್ರಮ ಕೈಗೊಳ್ಳವುದಾಗಿ ತಿಳಿಸಿದ್ದಾರೆ.

ಇನ್ನೋವಾ ಕಾರು ಮಾಜಿ ಸಚಿವೆ ಹಾಗೂ ನಟಿ ಉಮಾಶ್ರೀ ಸೇರಿದ ಕಾರು ಎಂದು ತಿಳಿದುಬಂದಿದ್ದು, ಘಟನೆ ವೇಳೆ ನಟಿ ಉಮಾಶ್ರೀ ಇರಲಿಲ್ಲ ಎಂದು ವರದಿಯಾಗಿದೆ.