ಆರೋಗ್ಯದಲ್ಲಿ ಏರುಪೇರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲು

0
491

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ವಿಪರೀತ ಜ್ವರ ಹಾಗೂ ನಿಶ್ಯಕ್ತಿ ಯ ಕಾರಣದಿಂದ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎನ್ ಡಿ ಟಿ ವಿ ವರದಿ ಮಾಡಿದೆ.

ಮನಮೋಹನ್ ಸಿಂಗ್ ರವರನ್ನು ಏಮ್ಸ್ ನ ಹೃದ್ರೋಗ ವಿಭಾಗದಲ್ಲಿ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿದ್ದು, ಎರಡು ವಾರಗಳ ಹಿಂದಷ್ಟೇ ಅಂದರೆ ಸೆಪ್ಟೆಂಬರ್ 26ರಂದು 89 ನೇ ವರ್ಷಕ್ಕೆ ಕಾಲಿಟ್ಟಿದ್ದರು‌. ಸಿಂಗ್ ರವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.‌