ಸನ್ಮಾರ್ಗ ವಾರ್ತೆ
ಬೆಂಗಳೂರು: ವಿದ್ಯಾರ್ಥಿ ಯುವ ಸಂಘಟನೆಯಾಗಿರುವ ಫ್ರೆಟರ್ನಿಟಿ ಮೂವ್ ಮೆಂಟ್ ಕರ್ನಾಟಕ ಇದರ ರಾಜ್ಯಾಧ್ಯಕ್ಷರಾಗಿ ಮಂಗಳೂರಿನ ತಫ್ಲೀಲ್ ಯು. ಆಯ್ಕೆಯಾಗಿದ್ದಾರೆ. ಸಂಘಟನೆಯ ಆಂತರಿಕ ಚುನಾವಣೆಯಲ್ಲಿ ಅವರು ನೇಮಕಗೊಂಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಅವರು ಸರ್ವಾನುಮತದಿಂದ ಆಯ್ಕೆಯಾದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರಾದ ತಪ್ಲೀಲ್ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಗಳಿಸಿರುತ್ತಾರೆ. ಪ್ರಸ್ತುತ ಮಲ್ಟಿಮೀಡಿಯಾ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.












