ಕರ್ನಾಟಕದಿಂದ ಪ್ರತಿದಿನ 2 ಟನ್‌ ದನದ ಮಾಂಸ ಪೂರೈಕೆಯಾಗುತ್ತಿದೆ- ಗೋವಾ ಸಿಎಂ ಪ್ರಮೋದ್ ಸಾವಂತ್

0
1030

ಸನ್ಮಾರ್ಗ ವಾರ್ತೆ

ಪಣಜಿ: ಪ್ರತಿದಿನ 2,000 ಕೆಜಿಗಿಂತಲೂ ಹೆಚ್ಚು ದನದ ಮತ್ತು ಎಮ್ಮೆಯ ಮಾಂಸವು ಕರ್ನಾಟಕದಿಂದ ರಾಜ್ಯಕ್ಕೆ ಪೂರೈಕೆಯಾಗುತ್ತಿದೆ ಎಂಬುದಾಗಿ ಬಿಜೆಪಿ ಆಡಳಿತದಲ್ಲಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ. ಗೋವಾ ವಿಧಾನಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ.

ಕಳೆದ 6 ತಿಂಗಳಲ್ಲಿ ಕರ್ನಾಟಕದಿಂದ 388 ಟನ್‌ಗಳಷ್ಟು ದನ ಮತ್ತು ಎಮ್ಮೆಯ ಮಾಂಸ ರಾಜ್ಯಕ್ಕೆ ಪೂರೈಕೆಯಾಗಿದೆ. ಪ್ರತಿದಿನ ಕರ್ನಾಟಕದಿಂದ ಸರಾಸರಿ 2,120 ಕೆ.ಜಿಯಷ್ಟು ದನ ಮತ್ತು ಎಮ್ಮೆಯ ಮಾಂಸ ರಾಜ್ಯಕ್ಕೆ ಸಾಗಿಸಲಾಗುತ್ತಿದೆ ಎಂದು ತೆರಿಗೆ ದಾಖಲೆಗಳು ಹೇಳುತ್ತವೆ ಎಂದು ಮುಖ್ಯಮಂತ್ರಿ ಸಾವಂತ್ ಲಿಖಿತ ಉತ್ತರದಲ್ಲಿ ವಿವರಿಸಿದ್ದಾರೆ.

ಗೋವಾದ ಒಟ್ಟು ಜನಸಂಖ್ಯೆಯಲ್ಲಿ ಶೇ.30ರಷ್ಟು ಜನರು ದನ ಮತ್ತು ಎಮ್ಮೆಯ ಮಾಂಸವನ್ನು ಸೇವಿಸುತ್ತಾರೆ. ರಾಜ್ಯದಲ್ಲಿ ಮಾಂಸದ ಪೂರೈಕೆಗೆ ಮಹಾರಾಷ್ಟ್ರ ಮತ್ತು ಕರ್ನಾಟಕವನ್ನು ಅವಲಂಬಿಸಿದೆ.