ಗೋವಾದಲ್ಲಿ ಪಕ್ಷೇತರ ಶಾಸಕ ಕಾಂಗ್ರೆಸ್ ಸೇರ್ಪಡೆ

0
368

ಸನ್ಮಾರ್ಗ ವಾರ್ತೆ

ಪಣಜಿ: ಗೋವಾದಲ್ಲಿ ಪಕ್ಷೇತರ ಶಾಸಕ ಪ್ರಸಾದ್ ಗವೇಂಖರ್ ವಿಧಾನಸಭೆಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ತಿಳಿಸಿದರು. ವಿಧಾನಸಭಾ ಚುನಾವಣೆ ಘೋಷಣೆಯಾದ ಬೆನ್ನಿಗೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಟಿಕೆಟಿನಲ್ಲಿ ಸ್ಪರ್ಧಿಸಲಿದ್ದಾರೆ.

ಇದೇ ವೇಳೆ ಗೋವಾ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ತೃಣಮೂಲ ಕಾಂಗ್ರೆಸ್ ಸ್ವೀಕರಿಸಿದ ಕಾಂಗ್ರೆಸ್ ವಿರೋಧಿ ನಿಲುವನ್ನು ಶಿವಸೇನೆ ಟೀಕಿಸಿದೆ. ಇದು ಬಿಜೆಪಿಗೆ ಸಹಾಯಕವಾಗಲಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ. ಶಿವಸೇನೆಯ ಪತ್ರಿಕೆ ಸಾಮ್ನಾದ ಕಾಲಂನಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸಹಿತ ಇತರ ಪಾರ್ಟಿಗಳು ನಂಬಲರ್ಹರಲ್ಲದ ನಾಯಕರನ್ನು ತೃಣಮೂಲ ಕಾಂಗ್ರೆಸ್‍ಗೆ ಸೇರ್ಪಡೆಗೊಳಿಸಲಾಗುತ್ತಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯಂತಹವರಿಗೆ ಇದು ಒಪ್ಪುವಂತಹ ವಿಚಾರವಲ್ಲ ಎಂದು ಅವರು ಹೇಳಿದರು.