ಪುನೀತ್ ಕೆರೆಹಳ್ಳಿ ಬಿಡುಗಡೆ ಸರಕಾರದ ನಡೆ ಖಂಡನೀಯ: ವೆಲ್ಫೆರ್ ಪಾರ್ಟಿ

0
2523

ಸನ್ಮಾರ್ಗ ವಾರ್ತೆ

ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಕರ್ನಾಟಕ ಸರಕಾರದ ಸಲಹಾ ಮಂಡಳಿ ನ್ಯಾಯಾಲಯಕ್ಕೆ ನೀಡಿದ ವರದಿ ಆಶ್ಚರ್ಯಕರವಾಗಿದೆ. ಇದು ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲವಾರು ಸಮಾಜ ಘಾತುಕ ಕೊಲೆ ಹಲ್ಲೆ ಪ್ರಕರಣಗಳಲ್ಲಿ ಭಾಗಿಯಾಗಿ ಸರಕಾರಕ್ಕೆ ಅಲ್ಪಸಂಖ್ಯಾತರಿಗೆ ಬಹಿರಂಗ ಸವಾಲು ನೀಡಿದಂತಹಾ ಓರ್ವ ಆರೋಪಿಯ ರಕ್ಷಣೆಗೆ ಸರಕಾರವೇ ಇಳಿದಿರುವುದು ಅಕ್ಷಮ್ಯ. ಈತನ ಮೇಲೆ ವಿವಿಧ ಠಾಣೆಗಳಲ್ಲಿ ಎಂಟ್ಹತ್ತು ಪ್ರಕರಣಗಳಿದ್ದು ಇತ್ತೀಚೆಗೆ ಮಂಡ್ಯದ ಇದ್ರೀಸ್ ಪಾಷಾ ಹತ್ಯೆಯ ಆರೋಪವೂ ಇದ್ದು ಈತನ ಬಿಡುಗಡೆಗೆ ಸರಕಾರದ ಸಲಹಾ ಮಂಡಳಿ ಸಹಕರಿಸಿರುವುದು ಅನ್ಯಾಯದ ನಡೆಯಾಗಿದೆ.

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮತ್ತು ತನ್ನ ಸರಕಾರ ರಚನೆಯ ನಂತರ ದಿನವೂ ಅಲ್ಪ ಸಂಖ್ಯಾತರಿಗೆ ರಕ್ಷಣೆ ಮತ್ತು ಕೋಮುವಾದಿಗಳಿಗೆ ಸಮಾಜದಲ್ಲಿ ದ್ವೇಷ ಹರಡುವಂತಹವರಿಗೆ ಕಠಿಣ ಶಿಕ್ಷೆ ಕೊಡುವಂತಹಾ ಭಾಷಣಗಳನ್ನು ಪತ್ರಿಕಾ ಹೇಳಿಕೆಗಳನ್ನು ನಿರಂತರ ಹೇಳುತ್ತಾ ಬರುತ್ತಿರುವಾಗ ಸರಕಾರದ ಈ ನಡೆ ಅದಕ್ಕೆ ತದ್ವಿರುದ್ದವಾಗಿದೆ.

ಆದ್ದರಿಂದ ಕಾಂಗ್ರೆಸ್ ಸರಕಾರದ ಬಾಷಣ ಪತ್ರಿಕಾ ಹೇಳಿಕೆಗಳು ಕೇವಲ ಕಾಗದಗಳಿಗೆ ಸೀಮಿತವಾಗದೆ ಸರಿಯಾದ ರೀತಿಯಲ್ಲಿ ಅನುಷ್ಟಾನಕ್ಕೆ ಬರಬೇಕಾಗಿದೆ. ಸರಕಾರದ ಈ ನಡೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಕರ್ನಾಟಕ ಘಟಕ ತೀವ್ರವಾಗಿ ಖಂಡಿಸುತ್ತಿದೆ.