ಮಂಗಳೂರು: ಅಡ್ಯಾರ್ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯನ ಬರ್ಬರ ಕೊಲೆ

0
1032

ಸನ್ಮಾರ್ಗ ವಾರ್ತೆ

ಮಂಗಳೂರು,ಜು.11: ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಎಂಬುವವರ ಮೇಲೆ ನಿನ್ನೆ ರಾತ್ರಿ ದುಷ್ಕರ್ಮಿಗಳ ತಂಡವು ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ.

ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.

ಕೊಲೆಗೆ ವೈಯಕ್ತಿಕ ಹಾಗೂ ರಾಜಕೀಯ ಕಾರಣ ಎಂದು ಹೇಳಲಾಗುತ್ತಿದ್ದು, ಈ ಕುರಿತಾಗಿ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇ‌ಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.