ಒಮಾನ್‌‌: 60 ವರ್ಷ ಮೇಲ್ಪಟ್ಟ ಉದ್ಯೋಗಿಗಳಿಗೆ ಕಡ್ಡಾಯ ನಿವೃತ್ತಿ ಘೋಷಿಸಿ ಸುತ್ತೋಲೆ

0
1248

ಸನ್ಮಾರ್ಗ ವಾರ್ತೆ

ಮಸ್ಕತ್,ಜೂ.5: ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟ ಉದ್ಯೋಗಿಗಳಿಗೆ ಕಡ್ಡಾಯವಾಗಿ ನಿವೃತ್ತಿ ಭತ್ಯೆ ನೀಡಿಬೇಕೆಂದು ಹಣಕಾಸು ಇಲಾಖೆ ಸುತ್ತೋಲೆ ಹೊರಡಿಸಿದ್ದು, ಕ್ಯಾಬಿನೆಟ್ ಕೌನ್ಸಿಲ್ ತೀರ್ಮಾನದ ಪ್ರಕಾರವಾಗಿದೆ ಈ ಕ್ರಮ ಜಾರಿಗೊಳಿಸಲಾಗಿದೆ.

ಈ ಕ್ರಮವು ಉದ್ಯೋಗ ಲಭ್ಯತೆಯನ್ನು ಹೆಚ್ಚಿಸುವ ಮತ್ತು ಸ್ಥಳೀಯ ಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ ಎಂದು ಅಧಿಕೃತ ಸುದ್ದಿ ಸಂಸ್ಥೆ ತಿಳಿಸಿದೆ. ಎಲ್ಲಾ ಸರ್ಕಾರಿ ಸಂಸ್ಥೆಗಳು ಈ ನಿರ್ಧಾರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.