ಸನ್ಮಾರ್ಗ ವಾರ್ತೆ
ಬೆಂಗಳೂರು: ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಯಡಿಯೂರಪ್ಪನವರ ಮಾಜಿ ಮಾಧ್ಯಮ ಸಲಹೆಗಾರ ಹೆಚ್. ಎಸ್ . ಮಹಾದೇವ ಪ್ರಕಾಶ್ ರವರು ಕೋವಿಡ್ ನಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಹಿರಿಯ ಪತ್ರಕರ್ತರೂ ಆದ ಮಹಾದೇವ ಪ್ರಕಾಶ್ , ಈ ಭಾನುವಾರ ಪತ್ರಿಕೆಯ ಸಂಪಾದಕರೂ ಆಗಿದ್ದರು. ಈ ಹಿಂದೆ ಅವರು ಮಾಹಿತಿ ಮತ್ತು ಪ್ರಚಾರ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದರು. ಕೋವಿಡ್ ತಗುಲಿದ್ದರಿಂದ ಉಸಿರಾಟದ ಸಮಸ್ಯೆ ಉಲ್ಬಣಗೊಂಡು ಅವರು ನಾರಾಯಣ ಹೃದಯಾಲಯದಲ್ಲಿ ನಿಧನರಾದರು ಎಂದು ತಿಳಿದು ಬಂದಿದೆ. ಪತ್ರಿಕಾ ರಂಗದಲ್ಲಿ ಹೆಸರು ಗಳಿಸಿದ್ದ ಇವರು, ರಾಜಕೀಯ ವಿಶ್ಲೇಷಕರಾಗಿಯೂ ಗುರುತಿಸಿಕೊಂಡಿದ್ದರು.












