ತಮಿಳ್ನಾಡು ವಿವಿಧೆಡೆ ಭಾರೀ ಮಳೆ

0
165

ಸನ್ಮಾರ್ಗ ವಾರ್ತೆ

ಚೆನ್ನೈ: ತೂತುಕುಡಿ ಸೇರಿದಂತೆ ತಮಿಳುನಾಡಿನ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ. ಶುಕ್ರವಾರ ಬೆಳಗಿನ ಜಾವ ಸುರಿದ ಭಾರಿ ಮಳೆಗೆ ಹಲವೆಡೆ ಜಲಾವೃತವಾಗಿತ್ತು. ಇದರಿಂದ ಪ್ರಯಾಣಿಕರು ಪರದಾಡಿದರು. ಕಳೆದ ದಿನ ರಾಜ್ಯದ ಹಲವೆಡೆ ಮಳೆಯಾಗಿದೆ.

ಅದೇ ಸಮಯದಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕೇರಳದಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ರಾಯಲಸೀಮಾ ಮತ್ತು ಕೇರಳದಲ್ಲಿ ಮುಂದಿನ ಐದು ದಿನಗಳು ಮತ್ತು ತಮಿಳುನಾಡು ಮತ್ತು ಪುದುಚೇರಿಯಲ್ಲಿ ಎರಡು ದಿನ ಬಿಸಿ ಮತ್ತು ಆರ್ದ್ರತೆ ಇರುತ್ತದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.

ಮಾರ್ಚ್ 15 ರ ನಂತರ ಕೇರಳದಲ್ಲಿ ಬೇಸಿಗೆ ಮಳೆಯಾಗುವ ಹವಾಮಾನ ಮುನ್ಸೂಚನೆ ಇತ್ತು, ಆದರೆ ಎಲ್ಲಿಯೂ ಸಕ್ರಿಯ ಮಳೆಯಾಗಿಲ್ಲ. ಪಾಲಕ್ಕಾಡ್, ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಅಲಪ್ಪುಳ, ತ್ರಿಶೂರ್, ತಿರುವನಂತಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಮಾ.25ರವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನದ ಎಚ್ಚರಿಕೆ ನೀಡಲಾಗಿದೆ.