ಹಿಜಾಬ್,ಮತಾಂತರ, ಇತರ ವಿಧೇಯಕಗಳನ್ನು ಪರಿಶೀಲಿಸಲಾಗುವುದು – ಪ್ರಿಯಾಂಕ್ ಖರ್ಗೆ

0
207

ಸನ್ಮಾರ್ಗ ವಾರ್ತೆ

ಬೆಂಗಳೂರು: ಬಿಜೆಪಿ ಸರ್ಕಾರ ಜಾರಿಗೆ ತಂದ ಎಲ್ಲ ವಿಧೇಯಕವನ್ನು ಪರಿಶೀಲಿಸಿ ಹಿಂಪಡೆಯುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತೀವ್ರ ವಿರೋಧ ನಡುವೆ ಹಲವು ವಿಧೇಯಕ ಜಾರಿಗೆ ತಂದಿತ್ತು. ಅದರಲ್ಲಿ ಗೋಹತ್ಯಾ ನಿಷೇಧ, ಮತಾಂತರ ಮತ್ತು ಹಿಜಾಬ್ ನಿಷೇಧ ಪಾಲಿಸಿ ಬಹಳಷ್ಟು ಗೊಂದಲ ಏರ್ಪಡಿಸಿತ್ತು. ಇದೀಗ ಅದನ್ನೆಲ್ಲ ಕಸದ ಬುಟ್ಟಿಗೆ ಎಸೆಯಲು ರಾಜ್ಯ ಸರ್ಕಾರ ಆಲೋಚಿಸುತ್ತಿದೆ.

ನಾವು ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಒಂದು ವೇಳೆ ಶಾಂತಿ ಕದಡಿದರೆ ಅದು ಭಜರಂಗದಳ ಅಥವಾ ಆರ್‌ಎಸ್ಎಸ್ ಎಂಬುದನ್ನು ನಾವು ಪರಿಗಣಿಸುವುದಿಲ್ಲ.

ಕಾನೂನನ್ನು ಕೈಗೆತ್ತಿಕೊಂಡರೆ ನಿಷೇಧ ಕಟ್ಟಿಟ್ಟ ಬುತ್ತಿ. ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಭಜರಂಗದಳ, ಆರ್‌ಎಸ್ಎಸ್ ಸೇರಿದಂತೆ ಯಾವುದೇ ಸಂಘಟನೆಯನ್ನು ನಿಷೇಧಿಸಲು ಹಿಂದೆ ಮುಂದೆ ಯೋಚಿಸುವುದಿಲ್ಲ ಎಂದಿದ್ದಾರೆ.

ಸಮಾಜದಲ್ಲಿ ಕಾನೂನು ಮತ್ತು ಪೊಲೀಸರ ಭಯವಿಲ್ಲದೆ ಕೆಲವು ಅಂಶಗಳು ಮುಕ್ತವಾಗಿ ವಿಹರಿಸುತ್ತಿವೆ. ಕಳೆದ ಮೂರು ವರ್ಷಗಳಿಂದ ಈ ಪ್ರವೃತ್ತಿ ನಡೆಯುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.

ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜನರು ಅವರನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಕಾರಣವೇನು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು. ಕೇಸರಿಕರಣ ತಪ್ಪು ಎಂದು ಹೇಳಿದ್ದೇವೆ. ಎಲ್ಲರೂ ಅನುಸರಿಸಬಹುದಾದ ಬಸವಣ್ಣನವರ ತತ್ವಗಳನ್ನು ಕಾಂಗ್ರೆಸ್ ಅನುಸರಿಸುತ್ತದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.