ಸನ್ಮಾರ್ಗ ವಾರ್ತೆ
ಉಡುಪಿ: ಕೇಸರಿ ಶಾಲು ಹಾಗೂ ಹಿಜಾಬ್ ವಿವಾದವು ನಾಳೆ(ಸೋಮವಾರ) ಕರ್ನಾಟಕ ಹೈಕೋರ್ಟ್ ನಲ್ಲಿ ಮತ್ತೆ ವಿಚಾರಣೆಗೆ ಬರಲಿದ್ದು, ಈ ಮಧ್ಯೆ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಉಡುಪಿ ಜಿಲ್ಲಾದ್ಯಂತ 144 ಸೆಕ್ಷನ್ ಜಾರಿಗೊಳಿಸಿದ್ದಾರೆ.
ಅಲ್ಲದೇ, ಈ ಮಧ್ಯೆ ನಾಳೆ(ಸೋಮವಾರ) ಯಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಎಸ್ಪಿ ವಿಷ್ಣುವರ್ಧನ್ ಅವರು ಸೆಕ್ಷನ್ ಜಾರಿಗೊಳಿಸುವಂತೆ ಮನವಿ ಮಾಡಿದ್ದರು. ಆದ್ದರಿಂದ ಫೆ. 14 ರಿಂದ ಫೆಬ್ರವರಿ 19 ವರೆಗೆ ಅನ್ವಯವಾಗುವಂತೆ ಆದೇಶಿಸಿ ಉಡುಪಿ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ಹಿಬಉಡುಪಿ ನಗರದಲ್ಲಿ ಪೊಲೀಸ್ ಸಿಬ್ಬಂದಿಗಳಿಂದ ಪೆರೇಡ್ ನಡೆಸಲಾಯಿತು.
ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ.
ಪ್ರತಿಭಟನೆ, ಮೆರವಣಿಗೆ ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ ಜಾತಿ ಧರ್ಮಕ್ಕೆ ನೈತಿಕತೆ ವಿರುದ್ಧವಾಗಿ ನಡೆದುಕೊಳ್ಳುವಂತಿಲ್ಲ. ಶಸ್ತ್ರ, ದೊಣ್ಣೆ, ಕತ್ತಿ ಮತ್ತಿತರ ಮಾರಾಕಾಯುದಗಳ ಸಾಗಾಟಕ್ಕೆ ನಿಷೇಧ ಹೇರಲಾಗಿದೆ.
ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆಗೂ ಕೂಡ ನಿಷೇಧ ಹೇರಲಾಗಿದ್ದು, ಪ್ರಚೋದನಕಾರಿ ಭಾಷಣ, ಸಂಗೀತ, ಹಾಡು, ಘೋಷಣೆಗಳನ್ನು ಕೂಗುವಂತಿಲ್ಲ ಹಾಗೂ ಪಟಾಕಿ ಸಿಡಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ತನ್ನ ಆದೇಶದಲ್ಲಿ ತಿಳಿಸಿದ್ದಾರೆ.












