ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ: ಸುಬ್ರಮಣಿಯನ್ ಸ್ವಾಮಿ

0
488

ಸನ್ಮಾರ್ಗ ವಾರ್ತೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗಲು ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತೆ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್ ನಲ್ಲಿ ಪ್ರಜ್ಞಾ ಸಿಂಗ್ ಠಾಕೂರ್‌ಗೆ ಮತ್ತೆ ಭೋಪಾಲ್‌ನಲ್ಲಿ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಲಿಲ್ಲ. ಆರ್‌ಎಸ್‌ಎಸ್ ಅನ್ನು ಟೀಕಿಸಿದ ವ್ಯಕ್ತಿಗೆ ಅವಕಾಶ ನೀಡಲಾಗಿದೆ ಎಂದು ವ್ಯಕ್ತಿಯೊಬ್ಬರು ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ, ವಾರಣಾಸಿಯಲ್ಲಿ ಮೋದಿ ಸೋತರೆ ಮಾತ್ರ ಹಿಂದೂ ರಾಷ್ಟ್ರವಾಗುವುದು ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ತಪ್ಪುಗಳನ್ನು ಕಟುವಾಗಿಯೇ ಟೀಕಿಸುವ ಸುಬ್ರಮಣಿಯನ್ ಸ್ವಾಮಿ, ಬಿಜೆಪಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದಾರೆ.

ಹಿಂದೂ ಹೆಮ್ಮೆಯ ಉಲ್ಬಣವು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭವಿಷ್ಯವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಿದ್ದು ಮೋದಿ ಮೋಡಿಯಿಂದ ಅಲ್ಲ ಎಂದು ಟೀಕಿಸಿದ್ದ ಬಿಜೆಪಿಯ ಹಿರಿಯ ನಾಯಕ ಮತ್ತೊಮ್ಮೆ ಪ್ರಧಾನಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.