ಜುಲೈ 9ರಂದು ದ.ಕ. ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

0
178

ಸನ್ಮಾರ್ಗ ವಾರ್ತೆ

ದ.ಕ. ಹಾಗೂ ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತವಾಗಿ ಸುರಿಯುತ್ತಿರುವ ಮಳೆಯ ಕಾರಣ ಹಾಗೂ ಹವಾಮಾನ ಇಲಾಖೆ ಮಳೆಯ ತೀವ್ರತೆ ಕುರಿತಂತೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.9ರ ಮಂಗಳವಾರ ದ.ಕ. ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್‌ ಹಾಗೂ ಐಟಿಐಗಳು ಕಾರ್ಯನಿರ್ವಹಿಸಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹಾಗೂ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ತಮ್ಮ ಆದೇಶಗಳಲ್ಲಿ ತಿಳಿಸಿದ್ದಾರೆ.