ಇಂದು ಜೂನ್ 16, ದ.ಕ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿಗಳಿಗೆ ರಜೆ

0
712

ಸನ್ಮಾರ್ಗ ವಾರ್ತೆ

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಅಲರ್ಟ್ ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದು ಜೂ.16ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.