ದೇಶದಲ್ಲಿ ಕೊರೊನಾ ರೋಗಿಗಳ ಸಂಖ್ಯೆ 11.439; ಸಾವು 377

0
505

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ, ಎ.15: ಕೊರೊನ ರೋಗ ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗುತ್ತಿದೆ. ಕಳೆದ 24 ಗಂಟೆಗಳಲ್ಲಿ 1400 ಮಂದಿಗೆ ಕೊರೊನಾ ರೋಗ ತಗಲಿದೆ. ಒಟ್ಟು11, 439 ಮಂದಿಗೆ ರೋಗ ದೃಢಪಟ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇವರಲ್ಲಿ 377 ಮಂದಿ ರೋಗದಿಂದ ಮೃತಪಟ್ಟಿದ್ದಾರೆ. 9756 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1306 ಮಂದಿ ಕೊರೊನದಿಂದ ಗುಣಮುಖರಾಗಿದ್ದಾರೆ.

ಮಹಾರಾಷ್ಟ್ರದಲ್ಲಿ 2, 687 ಮಂದಿಗೆ ಕೊರೊನಾ ಇದೆ. ಇಲ್ಲಿ 160 ಮಂದಿ ಮೃತಪಟ್ಟಿದ್ದಾರೆ. ದಿಲ್ಲಿಯಲ್ಲಿ 1,561 ಮಂದಿಗೆ ರೋಗ ತಗಲಿದೆ. 28 ಮಂದಿ ಮೃತಪಟ್ಟಿದ್ದಾರೆ. ತಮಿಳ್ನಾಡಿನಲ್ಲಿ 11 ಮಂದಿ ಮೃತಪಟ್ಟಿದ್ದಾರೆ. 1,204 ಮಂದಿಗೆ ರೋಗ ದೃಢಪಟ್ಟಿದೆ.

ಮಹಾರಾಷ್ಟ್ರ, ತಮಿಳ್ನಾಡು, ದಿಲ್ಲಿ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ರೋಗಹರಡುವುದನ್ನು ತಡೆಯಲು ಸಾಧ್ಯವಾಗಿಲ್ಲ. ಮಧ್ಯಪ್ರದೇಶದಲ್ಲಿ 730 ಮಂದಿಗೆ ಕೊರೋನಾ ತಗಲಿದ್ದು 50 ಮಂದಿ ಮೃತಪಟ್ಟಿದ್ದಾರೆ. ಗುಜರಾತಿನಲ್ಲಿ 617 ಮಂದಿಗೆ ಕೊರೊನಾ ಬಾಧಿಸಿದ್ದು 26 ಮಂದಿ ಮೃತಪಟ್ಟಿದ್ದಾರೆ.

ಓದುಗರೇ, sanmarga ಫೇಸ್ ಬುಕ್ ಪೇಜ್ ಅನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.