ಹಿಜಾಬ್ ತೀರ್ಪು: ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್‌

0
336

ಸನ್ಮಾರ್ಗ ವಾರ್ತೆ

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು ತೀರ್ಪು ಪ್ರಕಟಿಸಿದೆ‌. ವಿಸ್ತಾರವಾದ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್‌ನ ದ್ವಿಸದಸ್ಯ ಪೀಠದ ನ್ಯಾಯಾಧೀಶರು ಭಿನ್ನ ತೀರ್ಪು ನೀಡಿರುವುದರಿಂದ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಲಾಗಿದೆ.

ಪ್ರತ್ಯೇಕ ತೀರ್ಪುಗಳನ್ನು ನೀಡಿದ ಪೀಠ

ನ್ಯಾ. ಹೇಮಂತ್‌ ಗುಪ್ತಾ‌ರವರು ಅರ್ಜಿದಾರರ ಮನವಿಯನ್ನು ತಿರಸ್ಕರಿಸಿ ವಜಾಗೊಳಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದರು. ಮತ್ತೊಂದೆಡೆ ಸರ್ಕಾರದ ಆದೇಶವನ್ನು ರದ್ದುಪಡಿಸಿ ನ್ಯಾ.ಸುಧಾಂಶು ಧುಲಿಯಾ ತೀರ್ಪು ನೀಡಿದ್ದು, ಹೆಣ್ಣು ಮಕ್ಕಳ ಶಿಕ್ಷಣ ಅತ್ಯಂತ ಮುಖ್ಯವಾದುದು ಎಂದಿದ್ದಾರೆ.