ಸನ್ಮಾರ್ಗ ವಾರ್ತೆ
ಸದನದ ಧರಣಿ ನಡೆಸಿ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮೇಲೆ ವಿಧೇಯಕ ಪ್ರತಿಗಳನ್ನು ಹರಿದು ಪೀಠಕ್ಕೆ ಎಸೆದ ಹಿನ್ನೆಲೆಯಲ್ಲಿ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಆದೇಶ ನೀಡಿದ್ದಾರೆ.
ಅಸಭ್ಯ ನಡವಳಿಕೆ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದ್ದು, ಅಧಿವೇಶನ ಮುಗಿಯುವವರೆಗೂ ಭಾಗವಹಿಸದಂತೆ ಅಮಾನತು ಮಾಡಲಾಗಿದೆ.
ಸದನದಲ್ಲಿ ಅಗೌರವ ತೋರಿದ 10 ಬಿಜೆಪಿ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ, ವೇದವ್ಯಾಸ ಕಾಮತ್, ಅರವಿಂದ ಬೆಲ್ಲದ್, ಧೀರಜ್ ಮುನಿರಾಜು, ಯಶ್ಪಾಲ್ ಸುವರ್ಣ, ಸುನೀಲ್ ಕುಮಾರ್, ಆರ್.ಅಶೋಕ್, ಉಮಾನಾಥ್ ಕೋಟ್ಯಾನ್, ಆರಗ ಜ್ಞಾನೇಂದ್ರ, ಭರತ್ ಶೆಟ್ಟಿ ಅವರನ್ನು ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ. ಜುಲೈ 21ರವರೆಗೆ ಅಧಿವೇಶನ ನಡೆಯಲಿದೆ.












