ದೇಶದಲ್ಲಿ 10,549 ಹೊಸ ಕೊರೋನ ಪ್ರಕರಣಗಳು ವರದಿ

0
20

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ದೇಶದಲ್ಲಿ ಹೊಸದಾಗಿ 10,549 ಮಂದಿಗೆ ಕೊರೊನ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಕಳೆದ 24 ಗಂಟೆಯಲ್ಲಿ ಶೇ.15ರಷ್ಟು ಹೆಚ್ಚಳವಾಗಿದೆ. ಇದರೊಂದಿಗೆ ಕೊರೋನ ಪೀಡಿತರ ಸಂಖ್ಯೆ 3,4,55,431ಕ್ಕೆ ತಲುಪಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿದ ದತ್ತಾಂಶಗಳ ಪ್ರಕಾರ 1,10,133 ಮಂದಿಗೆ ಕೊರೋನ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 539 ದಿನಗಳಲ್ಲಿ ಅತ್ಯಂತ ಕಡಿಮೆ ಪ್ರಮಾಣ ಇದು. ಶೇ. 9.33 ರಷ್ಟು ಸಂಖ್ಯೆ ಕೊರೋನದಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.

LEAVE A REPLY

Please enter your comment!
Please enter your name here