ಒಂದೇ ದಿನದಲ್ಲಿ 40 ಸಾವಿರಕ್ಕೂ ಅಧಿಕ ಕೋವಿಡ್ ಸೋಂಕು ಪ್ರಕರಣಗಳು

0
330

ಸನ್ಮಾರ್ಗ ವಾರ್ತೆ

ನವದೆಹಲಿ,ಜು.20: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,000 ಕ್ಕೂ ಹೆಚ್ಚು ಕೋವಿಡ್ -19 ಪ್ರಕರಣಗಳ ವರದಿಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆಯು 11 ಲಕ್ಷದ ಗಡಿ ದಾಟಿದೆ‌.

ದೇಶ ಕಂಡ ಅತಿದೊಡ್ಡ ಏಕದಿನ ಪ್ರಕರಣಗಳ ಸಂಖ್ಯೆ ಇದಾಗಿದ್ದು 40,425 ಪ್ರಕರಣಗಳು ವರದಿಯಾಗಿವೆ.

ಇದು ಭಾರತದಲ್ಲಿ ಮಾರಕ ವೈರಸ್‌ನ ಹೆಚ್ಚು ವೇಗವಾಗಿ ಹರಡುತ್ತಿದೆ ಎಂಬುದರ ಸೂಚನೆಯಾಗಿದೆ. ಸಾಂಕ್ರಾಮಿಕ ರೋಗದ ಪ್ರಾರಂಭದ ನಂತರ ದೇಶವು 40,000 ಕ್ಕೂ ಹೆಚ್ಚು ಪ್ರಕರಣಗಳನ್ನು ವರದಿ ಮಾಡಿದ್ದು ಇದೇ ಮೊದಲ ಬಾರಿಯಾಗಿದೆ.

24 ಗಂಟೆಗಳಲ್ಲಿ 681 ಜನರು ಅಸುನೀಗಿದ್ದು, ವೈರಸ್‌ನಿಂದ ಸಾವಿಗೀಡಾದವರ ಸಂಖ್ಯೆ 27,497 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಕೋವಿಡ್ -19 ನಿಂದ ಏಳು ಲಕ್ಷಕ್ಕೂ ಹೆಚ್ಚು ಜನರು ಚೇತರಿಸಿಕೊಂಡಿದ್ದು, 3,90,459 ಸಕ್ರಿಯ ಪ್ರಕರಣಗಳಿವೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್‌ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.