ಸನ್ಮಾರ್ಗ ವಾರ್ತೆ
ರಿಯಾದ್: ಸೌದಿ ಅರೇಬಿಯಾದ ರಿಯಾದ್ನಲ್ಲಿ ಅಕ್ಟೋಬರ್ 10ರಂದು ಹೌತಿ ಬಂಡುಕೋರರು ನಡೆಸಿದ ಕ್ಷಿಪಣಿ ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಭಾರತೀಯ ಪ್ರಜೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ರಿಯಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕೃತವಾಗಿ ಖಚಿತಪಡಿಸಿದೆ.
ಹೌತಿಗಳು ನಡೆಸಿದ ಈ ಭೀಕರ ದಾಳಿಯಲ್ಲಿ ಒಟ್ಟು 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, ನಾಗರಿಕ ವಿಮಾನಯಾನ ಪ್ರಾಧಿಕಾರ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ, ಈ ದುರ್ಘಟನೆಯಲ್ಲಿ ಒಟ್ಟು 309 ಮಂದಿ ಗಾಯಗೊಂಡಿದ್ದಾರೆ.
ಮೃತರ ಕುಟುಂಬ ವರ್ಗಕ್ಕೆ ಭಾರತೀಯ ರಾಯಭಾರ ಕಚೇರಿಯು ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ಸಂತ್ರಸ್ತ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ರೀತಿಯ ಬೆಂಬಲವನ್ನು ನೀಡುವುದರ ಜೊತೆಗೆ, ಮೃತರ ಪಾರ್ಥಿವ ಶರೀರವನ್ನು ಆದಷ್ಟು ಶೀಘ್ರವಾಗಿ ಭಾರತಕ್ಕೆ ಮರಳಿಸಲು ರಾಯಭಾರ ಕಚೇರಿಯು ಎಲ್ಲಾ ರೀತಿಯ ವ್ಯವಸ್ಥೆ ಮಾಡುತ್ತಿದ್ದು, ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ತಿಳಿಸಿದೆ.












