ದೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಕೊರೋನ ಸಾವು ಪ್ರಕರಣಗಳು ವರದಿ

0
483

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ,ಅ.3: ದೇಶದಲ್ಲಿ ಕೊರೋನ ಸಾವಿನ ಸಂಖ್ಯೆ ಒಂದು ಲಕ್ಷ ದಾಟಿದೆ. ಭಾರತದಲ್ಲಿ ಒಟ್ಟು ಕೊರೋನ ಸಾವುಗಳ ಸಂಖ್ಯೆ 1,00,842ಕ್ಕೆ ಏರಿಕೆಯಾಗಿದೆ.

ಒಟ್ಟು ಸೋಂಕಿತರ ಸಂಖ್ಯೆ 64.73ಲಕ್ಷಕ್ಕೆ ಏರಿಕೆಯಾಗಿದ್ದು, ಇದರಲ್ಲಿ 9,44,996 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 54,27,707 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಅಮೆರಿಕದ ನಂತರ ಅತೀಹೆಚ್ಚು ಕೊರೋನ ರೋಗಿಗಳ ಸಂಖ್ಯೆಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಇದೇವೇಳೆ, ಇತರ ದೇಶಗಳಿಗೆ ಹೋಲಿಸಿದರೆ ಕೊರೋನದಿಂದಾದ ಮರಣ ದರ ಪ್ರಮಾಣ ಕಡಿಮೆಯಾಗಿದೆ.