ಸನ್ಮಾರ್ಗ ವಾರ್ತೆ
ಟೆಹ್ರಾನ್ : ಇಸ್ರೇಲ್ನ ದಾಳಿಯ ಕುರಿತು ಇರಾನ್ನ ಸರ್ವೋಚ್ಚ ನಾಯಕ ಅಯತುಲ್ಲಾ ಅಲಿ ಖಾಮಿನೈ ಶನಿವಾರ ಹೇಳಿಕೆ ನೀಡಿದ್ದು, ಇಸ್ರೇಲ್ “ತಪ್ಪು ಹೆಜ್ಜೆ ಇಟ್ಟಿದೆ” ಎಂದು ತೀವ್ರವಾಗಿ ಟೀಕಿಸಿದ್ದಾರೆ.
ಶುಕ್ರವಾರ ರಾತ್ರಿ, ಸ್ಥಳೀಯ ಕಾಲಮಾನದ ಪ್ರಕಾರ, ಇರಾನ್ನ ಪ್ರಮುಖ ಸೇನಾ ನೆಲೆಗಳ ಮೇಲೆ ಇಸ್ರೇಲ್ ವೈಮಾನಿಕ ದಾಳಿಗಳನ್ನು ನಡೆಸಿದ್ದು, ಇದರಿಂದ ಪ್ರಾದೇಶಿಕ ಉದ್ವಿಗ್ನತೆಯು ಮತ್ತಷ್ಟು ತೀವ್ರವಾಗಿದೆ.
ಈ ತಿಂಗಳಲ್ಲಿ ಎರಡನೇ ಬಾರಿ ಎರಡೂ ರಾಷ್ಟ್ರಗಳ ನಡುವೆ ಗಡಿಯಲ್ಲಿ ಉದ್ರಿಕ್ತತೆ ತೀವ್ರಗೊಳ್ಳುವ ಲಕ್ಷಣ ಗೋಚರಿಸುತ್ತಿದೆ. ಇಸ್ರೇಲ್ ದಾಳಿಗೆ ಪ್ರತಿಕ್ರಿಯೆಯಾಗಿ ಸುಮಾರು 200 ಕ್ಷಿಪಣಿಗಳನ್ನು ಇಸ್ರೇಲ್ ಕಡೆಗೆ ಇರಾನ್ ಇತ್ತೀಚೆಗೆ ಹಾರಿಸಿತ್ತು.