ಮುಸ್ಲಿಮರ ವಿರುದ್ಧ ದ್ವೇಷಕ್ಕೆ ಕಡಿವಾಣ ಹಾಕುವಂತೆ ರಾಜ್ಯ ಸರಕಾರವನ್ನು ಆಗ್ರಹಿಸಿದ ಜಮಾಅತೆ ಇಸ್ಲಾಮಿ ಹಿಂದ್

0
264

ಸನ್ಮಾರ್ಗ ವಾರ್ತೆ

ಮಾಧ್ಯಮಗಳು ಮತ್ತು ಹಲವು ರಾಜಕೀಯ ಮುಖಂಡರು, ಮುಸ್ಲಿಮರನ್ನು ಗುರಿಯಾಗಿಸಿ ದ್ವೇಷ ಹುಟ್ಟು ಹಾಕುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಈ ಮೂಲಕ ಸಮಾಜದಲ್ಲಿ ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಸರಕಾರವನ್ನು ಆಗ್ರಹಿಸಿದೆ.

ಇತ್ತೀಚಿಗೆ ಹಾಸನದಲ್ಲಿ ನಡೆದ ಮೂರು ದಿನಗಳ ವಾರ್ಷಿಕ ಸಭೆಯಲ್ಲಿ ವಿವಿಧ ವಿಷಯಗಳ ಮೇಲೆ ಬೆಳಕು ಚೆಲ್ಲಲಾಗಿದೆ.

ರಾಜಕೀಯ ಹಿತಾಸಕ್ತಿಗಾಗಿ ಸಮಾಜದಲ್ಲಿ ಒಡಕು ಮೂಡಿಸಿ ದ್ವೇಷದ ಬೆಂಕಿ ಹೊತ್ತಿಸಿ ಸತತವಾಗಿ ಕೊಲೆ ರಕ್ತಪಾತದ ಘಟನೆಗಳು ನಡೆಯುತ್ತಿದ್ದು ತಪ್ಪಿತಸ್ಥರಿಗೆ ಶಿಕ್ಷೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷವನ್ನು ಹುಟ್ಟು ಹಾಕಲಾಗುತ್ತಿದೆ. ಹಣದುಬ್ಬರ ಮತ್ತು ನಿರುದ್ಯೋಗದಂತಹ ಎಲ್ಲ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸರಿಸಲು ದ್ವೇಷವನ್ನು ಪ್ರಚೋದಿಸುವ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಯೋಜಿತ ಕೃತ್ಯಗಳನ್ನು ಜಮಾಅತೆ ಇಸ್ಲಾಮಿ ಹಿಂದ್ ಖಂಡಿಸುತ್ತದೆ ಎಂದು ತಿಳಿಸಲಾಗಿದೆ.

ಮುಸ್ಲಿಂ ಸಮುದಾಯ ವಿಶೇಷವಾಗಿ ಯುವಜನರು ಇತ್ತೀಚಿನ ದಿನಗಳಲ್ಲಿ ತೀವ್ರವಾದ ಪ್ರಚೋದನೆಗಳನ್ನು ತಟಸ್ಥಗೊಳಿಸಲು ವಹಿಸಿದ ತಾಳ್ಮೆ ಬುದ್ಧಿವಂತಿಕೆ ಮತ್ತು ಧೈರ್ಯವು ಶ್ಲಾಘನೀಯವಾಗಿದೆ. ಅದೇ ರೀತಿ ಸಂಸತ್ತಿನ ಚುನಾವಣೆಗಳಲ್ಲಿ ವಿವಿಧ ರಾಷ್ಟ್ರೀಯ ಸಂಘಟನೆಗಳು ಮತ್ತು ಸಂಸ್ಥೆಗಳ ಪಾತ್ರ ಮೌಲ್ಯಯುತವಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಹೇಳಿದೆ.

ಹಾಗೆಯೇ ಫೆಲೆಸ್ತೀನ್ ನ ಭೀಕರ ಪರಿಸ್ಥಿತಿಯ ಬಗ್ಗೆ ಗಾಢ ಕಳವಳವನ್ನು ವ್ಯಕ್ತಪಡಿಸಿದೆ.