ಸನ್ಮಾರ್ಗ ವಾರ್ತೆ
ಬೆಂಗಳೂರು, ಆ. 5: ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ವತಿಯಿಂದ “ಕ್ರಾಂತಿಯ ಜ್ಯೋತಿ – ಪ್ರವಾದಿ ಮುಹಮ್ಮದ್ ﷺ” ಎಂಬ ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ ರಾಜ್ಯಮಟ್ಟದ ಸೀರತ್ ಅಭಿಯಾನ–2026ರ ಪೋಸ್ಟರ್ ಅನ್ನು ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ರಾಜ್ಯಾಧ್ಯಕ್ಷ ಡಾ. ಮುಹಮ್ಮದ್ ಸಾದ್ ಬೆಳಗಾಮಿ ಅವರು ರಾಜ್ಯ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಅಧಿಕೃತವಾಗಿ ಅನಾವರಣಗೊಳಿಸಿದರು.
ರಾಜ್ಯದಾದ್ಯಂತ 2026ರ ಆಗಸ್ಟ್ 26ರಿಂದ ಸೆಪ್ಟೆಂಬರ್ 6ರವರೆಗೆ ನಡೆಯಲಿರುವ ಈ ಸೀರತ್ ಅಭಿಯಾನದ ಅಂಗವಾಗಿ ಪ್ರವಾದಿ ಮುಹಮ್ಮದ್ ﷺ ಅವರ ಜೀವನ, ಆದರ್ಶ ವ್ಯಕ್ತಿತ್ವ, ನೈತಿಕ ಮೌಲ್ಯಗಳು ಹಾಗೂ ಸಾರ್ವಕಾಲಿಕ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳು, ಉಪನ್ಯಾಸಗಳು, ಸಂವಾದಗಳು, ಪ್ರದರ್ಶನಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.
ಸಮಾಜದಲ್ಲಿ ಶಾಂತಿ, ನ್ಯಾಯ, ಸಹಬಾಳ್ವೆ, ಮಾನವೀಯತೆ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಈ ಅಭಿಯಾನವನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕವಾಗಿ ನಡೆಸಲಾಗುವುದು ಎಂದು ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ತಿಳಿಸಿದೆ.












