ಜಮ್ಮು-ಕಾಶ್ಮೀರ: ಒಮರ್ ಅಬ್ದುಲ್ಲಾ ಮುಂದಿನ ಮುಖ್ಯಮಂತ್ರಿ: ಫಾರೂಕ್ ಅಬ್ದುಲ್ಲಾ ಘೋಷಣೆ

0
60

ಸನ್ಮಾರ್ಗ ವಾರ್ತೆ

ಶ್ರೀನಗರ : “ಜಮ್ಮು ಕಾಶ್ಮೀರದ ಮುಂದಿನ ಸಿಎಂ ಉಮ‌ರ್ ಅಬ್ದುಲ್ಲಾ”, ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ.

ಜಮ್ಮು ಕಾಶ್ಮೀರದ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಮುನ್ನಡೆ ಪಡೆಯುತ್ತಿದ್ದಂತೆ ಮಾಧ್ಯದೊಂದಿಗೆ ಮಾತನಾಡಿದ ಫಾರೂಕ್ ಅಬ್ದುಲ್ಲಾ, “ಜನರು ತಮ್ಮ ಜನಾದೇಶವನ್ನು ನೀಡಿದ್ದಾರೆ, ಅವರು ಆಗಸ್ಟ್‌ 5 ರಂದು ತೆಗೆದುಕೊಂಡ ನಿರ್ಧಾರವನ್ನು ಒಪ್ಪುವುದಿಲ್ಲ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ” ಎಂದು ಹೇಳಿದ್ದಾರೆ.