ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಬಗ್ಗೆ ನಿಮ್ಮ ನಿಲುವನ್ನು ಸ್ಪಷ್ಟಪಡಿಸಿ: ತೆಲಂಗಾಣ ಸರಕಾರಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ಆಗ್ರಹ

0
721

ಸನ್ಮಾರ್ಗ ವಾರ್ತೆ

ಹೈದರಾಬಾದ್: ಎನ್‌ಪಿಆರ್ ಮತ್ತು ಎನ್‌ಆರ್‌ಸಿ ಕುರಿತ ತನ್ನ ನಿಲುವನ್ನು ಸ್ಪಷ್ಟಪಡಿಸುವಂತೆ ಜಮಾಅತೆ ಇಸ್ಲಾಮಿ ಹಿಂದ್ ತೆಲಂಗಾಣ ಘಟಕವು ತೆಲಂಗಾಣ ಸರ್ಕಾರವನ್ನು ಒತ್ತಾಯಿಸಿದೆ. ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಸಿಎಬಿ ವಿರುದ್ಧ ಮತ ಚಲಾಯಿಸಿದ್ದಕ್ಕಾಗಿ ಜಮಾಅತೆ ಇಸ್ಲಾಮಿ ರಾಜ್ಯ ಅಧ್ಯಕ್ಷ ಹಮೀದ್ ಮೊಹಮ್ಮದ್ ಖಾನ್ ತೆಲಂಗಾಣ ಸರಕಾರವನ್ನು ಶ್ಲಾಘಿಸಿದರು. ಸಿಎಎ ವಿರುದ್ಧ ರಾಜ್ಯ ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸುವ ಸರ್ಕಾರದ ನಿರ್ಧಾರವನ್ನೂ ಅವರು ಸ್ವಾಗತಿಸಿದರು.

“ಸಂವಿಧಾನದ ನೈತಿಕ ಮೌಲ್ಯಗಳನ್ನು ರಾಜ್ಯ ಸರ್ಕಾರವು ರಕ್ಷಿಸಿದೆ. ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸುವ ಸರ್ಕಾರದ ನಿರ್ಧಾರವು ಸ್ವಾಗತಾರ್ಹವಾಗಿದೆ. ಅದೇ ರೀತಿ ಸರಕಾರವು ಎನ್‌ಪಿಆರ್‌ನ ಬಗ್ಗೆಯೂ ಕ್ರಮ ಕೈಗೊಳ್ಳುತ್ತದೆ ಎಂಬ ಆಶಾವಾದವನ್ನು ಅವರು ವ್ಯಕ್ತಪಡಿಸಿದ್ದಾರೆ. ಎನ್‌ಆರ್‌ಸಿ ಮತ್ತು ಎನ್‌ಪಿಆರ್‌ಗೆ ಸಂಬಂಧಿಸಿದಂತೆ ನಾಗರಿಕರ ಅನುಮಾನವನ್ನು ಗಂಭೀರವಾಗಿ ಪರಿಗಣಿಸುವಂತೆ ಅವರು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರಲ್ಲಿ ವಿನಂತಿಸಿದ್ದಾರೆ.