ಕಮಲ್ ಮೌಲಾ ಮಸೀದಿ: ನ್ಯಾಯಾಂಗ ತೀರ್ಪಿಗೆ ಜಮಾಅತೆ ಇಸ್ಲಾಮಿ ಹಿಂದ್ ಕಳವಳ

0
248

ಸನ್ಮಾರ್ಗ ವಾರ್ತೆ

ಕಮಲ್ ಮೌಲಾ ಮಸೀದಿಯನ್ನು ಮಂದಿರ ಎಂದು ಘೋಷಿಸಿರುವ ಮಧ್ಯಪ್ರದೇಶ ಹೈಕೋರ್ಟ್ ತೀರ್ಪಿನ ಬಗ್ಗೆ ಜಮಾಅತೆ ಇಸ್ಲಾಮಿ ಹಿಂದ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ತೀರ್ಪು ನ್ಯಾಯಾಂಗ ವ್ಯವಸ್ಥೆಯ ವಿಶ್ವಾಸಾರ್ಹತೆ, ಅಲ್ಪಸಂಖ್ಯಾತರ ಹಕ್ಕುಗಳು, ಧಾರ್ಮಿಕ ಸ್ವಾತಂತ್ರ್ಯ, ಕೋಮು ಸಾಮರಸ್ಯ ಮತ್ತು ದೇಶದ ಜಾತ್ಯತೀತ ರಚನೆಯ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ರಾಷ್ಟ್ರೀಯ ಅಧ್ಯಕ್ಷ ಸೈಯದ್ ಸಆದತುಲ್ಲಾ ಹುಸೇನಿ ಹೇಳಿದ್ದಾರೆ.

ಸಂವಿಧಾನದ 25 ಮತ್ತು 26 ನೇ ವಿಧಿಗಳಲ್ಲಿ ನೀಡಲಾದ ಧಾರ್ಮಿಕ ಹಕ್ಕುಗಳ ರಕ್ಷಣೆಗೆ ಈ ತೀರ್ಪು ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ದಶಕಗಳ ಕಾಲ ಭೋಜ ಶಾಲಾ ಸಂಕೀರ್ಣವು ಎರಡೂ ಪಂಗಡಗಳ ಜನರು ತಮ್ಮ ಧಾರ್ಮಿಕ ಆಚರಣೆಗಳನ್ನು ನಡೆಸ್ತಾ ಇದ್ರು ಎಂದು ಅವರು ನೆನಪಿಸಿದ್ದಾರೆ.

ಮುಸ್ಲಿಮರ ಧಾರ್ಮಿಕ ಹಕ್ಕುಗಳನ್ನು ತೆಗೆದುಹಾಕುವ ಮೂಲಕ ಇನ್ನೊಂದು ಪಂಥಕ್ಕೆ ಆದ್ಯತೆ ನೀಡುವುದು ಆಡಳಿತಾತ್ಮಕ ವಿಷಯಗಳ ಮೇಲೆ ಪರಿಣಾಮ ಬೀರುತ್ತದೆ. ಎಲ್ಲಾ ಧರ್ಮಗಳ ಸಮಾನ ಹಕ್ಕುಗಳಿಗೆ ಗಂಭೀರ ಅಪಾಯವನ್ನು ಉಂಟುಮಾಡುತ್ತದೆ. ವಿಶೇಷವಾಗಿ ಭಾರತದಂತಹ ಬಹುಮುಖ್ಯ ಸಮಾಜದಲ್ಲಿ ಸಮತೋಲನವನ್ನು ಕಾಯ್ದುಕೊಳ್ಳುವುದು ಬಹಳ ಮುಖ್ಯ. ಇಂತಹ ಸೂಕ್ಷ್ಮ ವಿಷಯಗಳನ್ನು ಎಚ್ಚರಿಕೆಯಿಂದ ನೋಡಬೇಕಾಗಿದೆ ಎಂದವರು ಹೇಳಿದ್ದಾರೆ.