ಸನ್ಮಾರ್ಗ ವಾರ್ತೆ
ನವದೆಹಲಿ:ಬಾಲಿವುಡ್ ನಟಿ ಕಂಗನಾ ರಾಣಾವತ್ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ರಮಝಾನ್ ಕುರಿತಾದ ಸಭೆ-ಸಮಾರಂಭಗಳನ್ನು ನಿಷೇಧಿಸಬೇಕೆಂದು ಕೋರಿ ಪ್ರಧಾನಿ ಮೋದಿಯವರಿಗೆ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಕುಂಭಮೇಳದ ನಂತರ ಗೌರವಾನ್ವಿತ ಪ್ರಧಾನಿ ಜೀ ದಯವಿಟ್ಟು ರಮಝಾನ್ ಸಭೆಯನ್ನು ಸಹ ನಿಲ್ಲಿಸುವಂತೆ ವಿನಂತಿಸಿಕೊಳ್ಳುತ್ತೇನೆ” ಎಂದಿದ್ದರು. ಆದರೆ, ತಾವು ಮಾಡಿದ ಟ್ವೀಟ್ನ್ನು ಕೆಲವೇ ಗಂಟೆಗಳಲ್ಲಿ ಕಂಗನಾ ಅಳಸಿ ಹಾಕಿದ್ದಾರೆ
ದೇಶದಲ್ಲಿ ಕೋವಿಡ್ ಎರಡನೇ ಅಲೆ ಹಬ್ಬುತ್ತಿರುವ ಸಂದರ್ಭದಲ್ಲಿ ಹರಿದ್ವಾರದಲ್ಲಿ ನಡೆಯುತ್ತಿದ್ದ ಮಹಾ ಕುಂಭಮೇಳಕ್ಕೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಈ ಹಿನ್ನೆಲೆ ಶನಿವಾರವಷ್ಟೇ ಈ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿಯವರು, ಈ ವರ್ಷ ಕುಂಭಮೇಳ ಸಂಭ್ರಮಾಚರಣೆಯನ್ನು ಸಾಂಕೇತಿಕವಾಗಿ ಆಚರಿಸುವಂತೆ ಹೇಳಿದ್ದರು.
ಪ್ರಧಾನಿ ನರೇಂದ್ರ ಮೋದಿಯವರ ಕುಂಭಮೇಳದ ಕುರಿತು ಮಾಡಿಕೊಂಡ ಮನವಿಯ ಬೆನ್ನಲ್ಲೇ ಕಂಗನಾ ರಮಝಾನ್ಗೆ ಜನ ಸೇರುವುದಕ್ಕೆ ನಿಷೇಧ ಹೇರಬೇಕೆಂದು ಹೇಳಿ ಟ್ವೀಟ್ ಮಾಡಿದ್ದರು.












