ರಾಜ್ಯದಲ್ಲಿ ಒಟ್ಟು 55,115 ಕೋವಿಡ್-19 ಪ್ರಕರಣಗಳು: 24 ಗಂಟೆಗಳಲ್ಲಿ 115 ಜನರು ಸೋಂಕಿಗೆ ಬಲಿ

0
518

ಸನ್ಮಾರ್ಗ ವಾರ್ತೆ

ಬೆಂಗಳೂರು,ಜು.17: ರಾಜ್ಯದಲ್ಲಿ 24 ಗಂಟೆಗಳಲ್ಲಿ 115 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆಯು 1147 ಕ್ಕೆ ಏರಿಕೆಯಾಗಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆವರೆಗಿನ ಅವಧಿಯಲ್ಲಿ 3,693 ಜನರಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢವಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆಯು 55,115 ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಾರ, ರಾಜ್ಯದಲ್ಲಿ 55,115 ಜನರಿಗೆ ಕೊರೋನ ಸೋಂಕು ತಗುಲಿದ್ದು, ಈ ಪೈಕಿ 20,757 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಅಲ್ಲದೇ, ಇಂದು 1,028 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 33,205 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 1,147 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.