ಬೆಂಗಳೂರು, ಜು.11: ಕಾಂಗ್ರೆಸ್ -ಜೆಡಿಎಸ್ ಸರಕಾರಕ್ಕೆ ಬಹುಮತ ಇದೆ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ಉದ್ಭವಿಸಿಲ್ಲ. 2008ರಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಆಗ ಯಡಿಯೂರಪ್ಪ ಕೂಡ ರಾಜೀನಾಮೆ ನೀಡಿರಲಿಲ್ಲ ಎಂದು ಕುಮಾರ ಸ್ವಾಮಿ ಹೇಳಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಹಿತ ಕಾಂಗ್ರೆಸ್ ನಾಯಕ ಸಮಾಲೋಚನೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಕುಮಾರಸ್ವಾಮಿ ಮಾತಾಡುತ್ತಿದ್ದರು. ಶಾಸಕರ ರಾಜೀನಾಮೆಯಿಂದ ಸೃಷ್ಟಿಯಾದ ಬಿಕ್ಕಟ್ಟು ಪರಿಹಾರಕ್ಕೆ ಕಾಂಗ್ರೆಸ್, ಜೆಡಿಎಸ್ ಪ್ರಯತ್ನಿಸುತ್ತಿದೆ.












