ಪ್ರತಿಭಟನಾ ನಿರತ ರೈತರಿಂದ ಆತ್ಮಹತ್ಯೆ| ಮಾನಸಿಕ ಅಸ್ವಸ್ಥರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ: ಕೃಷಿ ಸಚಿವ ಬಿ.ಸಿ ಪಾಟೀಲ

0
578

ಸನ್ಮಾರ್ಗ ವಾರ್ತೆ

ಬೆಂಗಳೂರು: ಕೃಷಿ ಕಾನೂನು ವಿರುದ್ಧ ದೇಶ ಪ್ರತಿಭಟನೆ ನಡೆಯುತ್ತಿರುವ ವೇಳೆ ರೈತರನ್ನು ಹೀಗೆಳೆಯುವಂತಹ ವಿವಾದಾತ್ಮಕ ಹೇಳಿಕೆಯನ್ನು ರಾಜ್ಯ ಕೃಷಿ ಸಚಿವ ಬಿ.ಸಿ ಪಾಟೀಲ ನೀಡಿದ್ದಾರೆ. ಮಾನಸಿಕ ಸಮಸ್ಯೆ ಇರುವ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿಗಳು ಎಂದು ಅವರು ಹೇಳಿದರು.

ಅವರ ಬೇಜವಾಬ್ದಾರಿ ಹೇಳಿಕೆಯು ವ್ಯಾಪಕ ಪ್ರತಿಭಟನೆಗೆ ಕಾರಣವಾಗಿದೆ. ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತಾಡುತ್ತಿದ್ದ ವೇಳೆ ವ್ಯಾಪಾರಿಗಳ ಸಹಿತ ಎಲ್ಲರೂ ಆತ್ಮಹತ್ಯೆ ಮಾಡುತ್ತಾರೆ. ಸರಕಾರದ ಕೃಷಿ ನೀತಿಗಳಿಗೆ ಯಾರೂ ಆತ್ಮಹತ್ಯೆ ಮಾಡಿಲ್ಲ. ಮಾನಸಿಕ ಸಮಸ್ಯೆ ಇದ್ದವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದರು.

ನೀವು ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಹೋಗಿ ಸಂತಯಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದು ನಿಲ್ಲುವುದಿಲ್ಲ. ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ರೈತರು ತಯಾರಾಗಬೇಕು ಎಂದರು.

ದಿಲ್ಲಿಯಲ್ಲಿ ಪಂಜಾಬ್, ಹರ್ಯಾಣದ ರೈತರು ಪ್ರತಿಭಟನೆಯಲ್ಲಿದ್ದಾರೆ. ಶರದ್‍ ಪವಾರ್ ಕೃಷಿ ಸಚಿವರಾಗಿದ್ದಾಗಲೂ ಇದೇ ಜನರು ಬೆಂಬಲ ಬೆಲೆ ಮತ್ತು ಎಪಿಎಂಸಿ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ಮಾಡಿದ್ದರು. ಆತ್ಮ ನಿರ್ಭರ್ ಯೋಜನೆಯಲ್ಲಿ 493 ಕೋಟಿ ರೂಪಾಯಿಯನ್ನು ಪ್ರಧಾನಿ ನೀಡಿದ್ದಾರೆ ಎಂದು ಸಚಿವರು ಹೇಳಿದರು.