ಸನ್ಮಾರ್ಗ ವಾರ್ತೆ
ಮಂಗಳೂರು: ಕರ್ನಾಟಕ ಮುಸ್ಲಿಂ ಅಡ್ವೊಕೇಟ್ ಫೋರಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಇತ್ತೀಚೆಗೆ ನಡೆದ ಕರ್ನಾಟಕ ಮುಸ್ಲಿಂ ಅಡ್ವೊಕೇಟ್ ಫೋರಂ ಗೆ ನಡೆದ ಚುನಾವಣೆಯಲ್ಲಿ ಜಯಬೇರಿ ಬಾರಿಸಿದ ಅಡ್ವೊಕೇಟ್ ಮುಝಫರ್ ಮತ್ತು ಪದಾಧಿಕಾರಿಗಳಿಗೆ ಅಭಿನಂದನೆ ಕಾರ್ಯಕ್ರಮ ಇತ್ತೀಚೆಗೆ ಹೈಲ್ಯಾಂಡ್ ಇಸ್ಲಾಮಿಕ್ ಫಾರಮ್ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ನ್ಯಾಯವಾದಿ ಮುಹಮ್ಮದ್ ಹನೀಫ್, ನಾಸಿರ್ ಲಕ್ಕಿಸ್ಟಾರ್, ಮಾಜಿ ಮೇಯರ್ ಅಶ್ರಫ್, ರಫೀಕ್ ಮಾಸ್ಟರ್,ಮುಸ್ತಫ ಸುಳ್ಯ, ಮುಹಿನುಲ್ಲ ಅಬ್ಬಾಸ್, ನ್ಯಾಯವಾದಿ ಝೀಶಾನ್, ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನ್ಯಾಯವಾದಿ ಅಬ್ದುಲ್ ಅಝೀಝ್ ವಹಿಸಿದರು.
















