ಕನ್ನಡಿಗರಿಗೆ ಖಾಸಗಿ, ಸರ್ಕಾರಿ ಹಾಗೂ ಅರೆ ಸರ್ಕಾರಿ ವಲಯದಲ್ಲಿ ಉದ್ಯೋಗ ಒದಗಿಸಲು ಆದ್ಯತೆ- ಸಿಎಂ ಬೊಮ್ಮಾಯಿ

0
465

ಸನ್ಮಾರ್ಗ ವಾರ್ತೆ

ಬೆಂಗಳೂರು: ಕನ್ನಡಿಗರಿಗೆ ಖಾಸಗಿ, ಸರ್ಕಾರಿ ಹಾಗೂ ಅರೆ ಸರ್ಕಾರಿ ವಲಯದಲ್ಲಿ ಉದ್ಯೋಗ ಕನ್ನಡಿಗರಿಗೆ ಖಾಸಗಿ, ಸರ್ಕಾರಿ ಹಾಗೂ ಅರೆ ಸರ್ಕಾರಿ ವಲಯದಲ್ಲಿ ಉದ್ಯೋಗ ಒದಗಿಸಲು  ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರುದ್ಯೋಗಿ ಯುವಕರಲ್ಲಿ ಭರವಸೆ ಹುಟ್ಟಿಸುವ ಮಾತುಗಳನ್ನು ಆಡಿದ್ದಾರೆ.

ಇಂದು ಶಿಕ್ಷಣ ಇಲಾಖೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬೊಮ್ಮಾಯಿ ಔದ್ಯೋಗಿಕ ನೀತಿಯ ಪರಿಣಾಮಕಾರಿ ಅನುಷ್ಠಾನದಿಂದ ಕೌಶಲ್ಯ, ಅರೆ ಕೌಶಲ್ಯ ವಲಯದಲ್ಲಿ ಶೇ 75ರಷ್ಟು ಉದ್ಯೋಗವನ್ನು ಕ್ನಡಿಗರಿಗೆ ದೊರಕಿಸಲು ಸರ್ಕಾರ ಆದ್ಯತೆ ನೀಡುತ್ತಿದೆ. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದ 180 ಸರ್ಕಾರಿ ಐ.ಟಿ.ಐಗಳ ಉನ್ನತೀಕರಣಕ್ಕೆ ಚಾಲನೆ ನೀಡಿದ್ದು ಇದೇ ತಿಂಗಳು ಉನ್ನತೀಕರಣದ ಕಾರ್ಯ ಪೂರ್ಣಗೊಂಡು ವಿದ್ಯಾರ್ಥಿಗಳಿಗೆ ಮುಕ್ತವಾಗಲಿದೆ ಎಂದರು.

ಪ್ರಾಥಮಿಕ ಮಟ್ಟದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ದೊರಕಿಸಿ ಜಾಗತಿಕ ಮಟ್ಟದಲ್ಲಿ ಪೈಪೋಟಿಗೆ ಸಿದ್ಧರಾಗುವಂತೆ ತಯಾರು ಮಾಡಲಾಗುವುದು. ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದು, ಮಾತೃ ಭಾಷೆಯಲ್ಲಿಯೇ ಉನ್ನತ ಹಾಗೂ ತಾಂತ್ರಿಕ ಶಿಕ್ಷಣವನ್ನು ಪಡೆಯಲು ನಮ್ಮ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದರು.