ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ಕೊರೋನ

0
400

ಸನ್ಮಾರ್ಗ ವಾರ್ತೆ

ಚೆನ್ನೈ,ಆ.3: ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಪುತ್ರ ಸಂಸದ ಕಾರ್ತಿ ಚಿದಂಬರಂಗೆ ಕೊರೋನ ದೃಢಪಟ್ಟಿದೆ. ಈ ಕುರಿತು ಸ್ವತಃ ಕಾರ್ತಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ತನಗೆ ಸಾಮಾನ್ಯ ರೋಗ ಲಕ್ಷಣಗಳು ಕಾಣಿಸಿಕೊಂಡಿದ್ದು, ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿದ್ದೇನೆ. ತನ್ನ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಅವರು ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಪುತ್ರಿಗೆ ಕೊರೋನ ದೃಢಪಟ್ಟಿದೆ. ಯಡಿಯೂರಪ್ಪ ಮತ್ತು ಪುತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಓದುಗರೇ, ಸನ್ಮಾರ್ಗ ಫೇಸ್‌ಬುಕ್ ಪೇಜ್‌ನ್ನು ಲೈಕ್ ಮಾಡುವ ಮೂಲಕ ನಮ್ಮನ್ನು ಬೆಂಬಲಿಸಿ.