ಕೇರಳ: ಕಾರ್ಮಿಕರಿಗೆ ಮಧ್ಯಾಹ್ನ 12 ರಿಂದ 3ರ ವರೆಗೆ ವಿಶ್ರಾಂತಿ

0
158

ಸನ್ಮಾರ್ಗ ವಾರ್ತೆ

ತಿರುವನಂತಪುರಂ: ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಮಧ್ಯಾಹ್ನ 12ರಿಂದ 3ರವರೆಗೆ ವಿಶ್ರಾಂತಿ ನೀಡುವಂತೆ ರಾಜ್ಯ ಸರಕಾರ ಸೂಚಿಸಿದೆ.

ಈ ಸಮಯದಲ್ಲಿ ಕೆಲಸ ಮಾಡಿಸಿದರೆ ಕೆಲಸ ಮಾಡಿಸಿದಾತನ ವಿರುದ್ಧ ಕ್ರಮ ಜರಗಿಸಲಾಗುವುದು. ಈ ಬದಲಾವಣೆ ಮೇ. 15ರ ವರೆಗಿರುತ್ತದೆ ಎಂದು ಸಚಿವ ಶಿವನ್ ಕುಟ್ಟಿ ತಿಳಿಸಿದರು.

ಈ ಮಧ್ಯೆ ಇಂದು ಎಲ್ಲಾ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ 12 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ ಹೆಚ್ಚಿನ ಜಿಲ್ಲೆಗಳಲ್ಲಿ ಬಿಸಿಗಾಳಿ ಮುನ್ನೆಚ್ಚರಿಕೆ ನೀಡಲಾಗಿದೆ. ಪಾಲಕ್ಕಾಡ್, ತ್ರಿಶೂರ್ ಮತ್ತು ಕೊಲ್ಲಂ ಜಿಲ್ಲೆಗಳ ನಂತರ, ಅಲಪ್ಪುಳ ಮತ್ತು ಕೋಝಿಕ್ಕೋಡ್‌ನಲ್ಲಿ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ. ಪಾಲಕ್ಕಾಡ್ ಆರೆಂಜ್ ಅಲರ್ಟ್ ಮುಂದುವರಿದಿದೆ. ಅಲಪ್ಪುಳ, ತ್ರಿಶೂರ್ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.

LEAVE A REPLY

Please enter your comment!
Please enter your name here