ಪಬ್ಲಿಕ್ ಅಫೇರ್ಸ್ ಇಂಡೆಕ್ಸ್-2020: ದೇಶದಲ್ಲಿ ಅತ್ಯುತ್ತಮ ಆಡಳಿತವಿರುವ ರಾಜ್ಯವಾಗಿ ಹೊರಹೊಮ್ಮಿದ ಕೇರಳ; 4ನೇ ಸ್ಥಾನದಲ್ಲಿ ಕರ್ನಾಟಕ

0
467

ಸನ್ಮಾರ್ಗ ವಾರ್ತೆ

ಹೊಸದಿಲ್ಲಿ: ಪಬ್ಲಿಕ್ ಅಫೇರ್ಸ್ ಸೆಂಟರ್ ಸಂಸ್ಥೆಯು ಬಿಡುಗಡೆಗೊಳಿಸಿದ ‘ಪಬ್ಲಿಕ್ ಅಫೇರ್ಸ್ ಇಂಡೆಕ್ಸ್-2020’ ರಲ್ಲಿ ದೇಶದ ಅತ್ಯುತ್ತಮ ಆಡಳಿತವಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಕೇರಳ ರಾಜ್ಯವು ಪಾತ್ರವಾಗಿದ್ದು ಉತ್ತರ ಪ್ರದೇಶ ಈ ಸೂಚ್ಯಂಕದಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ.

“ಸುಸ್ಥಿರ ಅಭಿವೃದ್ಧಿ ಮಾನದಂಡದ ಆಧಾರದಲ್ಲಿ ಈ ಸೂಚ್ಯಂಕದಲ್ಲಿ ರ್ಯಾಂಕಿಂಗ್ ನೀಡಿರುವುದಾಗಿ” ಸಂಸ್ಥೆಯ ಅಧ್ಯಕ್ಷರಾಗಿರುವ ಇಸ್ರೋದ ಮಾಜಿ ಮುಖ್ಯಸ್ಥ ಕೆ.ಕಸ್ತೂರಿರಂಗನ್ ತಿಳಿಸಿದರು.

2 ಕೋಟಿಗಿಂತ ಅಧಿಕ ಜನಸಂಖ್ಯೆಯಿರುವ 18 ರಾಜ್ಯಗಳ ಪೈಕಿ ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮೊದಲ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿದ್ದು, ಉತ್ತರ ಪ್ರದೇಶ, ಒಡಿಶಾ ಹಾಗೂ ಬಿಹಾರ ಋಣಾತ್ಮಕ ಅಂಕಗಳೊಂದಿಗೆ ಕೊನೆಯ ಸ್ಥಾನಗಳಲ್ಲಿವೆ.

2 ಕೋಟಿಗಿಂತ ಕಡಿಮೆ ಜನಸಂಖ್ಯೆಯ ರಾಜ್ಯಗಳ ಪೈಕಿ ಗೋವಾ ಪ್ರಥಮ ಸ್ಥಾನದಲ್ಲಿದ್ದು ಮೇಘಾಲಯ ಹಾಗೂ ಹಿಮಾಚಲ ಪ್ರದೇಶ ದ್ವಿತೀಯ ಹಾಗೂ ತೃತಿಯ ಸ್ಥಾನಗಳನ್ನು ಪಡೆದಿವೆ. ಮಣಿಪುರ, ದಿಲ್ಲಿ ಹಾಗೂ ಉತ್ತರಾಖಂಡ ಕೊನೆಯ ಸ್ಥಾನವನ್ನು ಪಡೆದುಕೊಂಡಿವೆ. ಕೇಂದ್ರಾಡಳಿತ ಪ್ರದೇಶಗಳ ಪೈಕಿ ಚಂಡೀಗಢ ಮೊದಲ ಸ್ಥಾನದಲ್ಲಿದೆ.