ಮದರಸಕ್ಕೆ ಕೊಂಡೊಯ್ಯುತ್ತಿದ್ದ 50 ಕ್ಕೂ ಹೆಚ್ಚು ಮುಸ್ಲಿಂ ಮಕ್ಕಳನ್ನು ವಶಕ್ಕೆ ಪಡೆದ ಕೋಲಾರ ಪೊಲೀಸರು

0
1562

ಕೋಲಾರ: ಮುಸ್ಲಿಂ ಸಮುದಾಯದ ಮಕ್ಕಳನ್ನು ಗುಂಪಾಗಿ ಸಾಗಿಸುತ್ತಿದ್ದ ವಿಷಯಕ್ಕೆ ಸಂಬಂಧಿಸಿ ಕೋಲಾರದಲ್ಲಿ ಪ್ರಕರಣ ದಾಖಲಾಗಿದೆ. 50ಕ್ಕೂ ಹೆಚ್ಚು ಮುಸ್ಲಿಂ ಮಕ್ಕಳನ್ನು ಸಾಗಾಟ ಮಾಡುತ್ತಿರುವುದನ್ನು ಕಂಡು ಆ ಬಗ್ಗೆ ಅನುಮಾನ ವ್ಯಕ್ತವಾದ ಕಾರಣ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದ ರೈಲ್ವೇ ನಿಲ್ದಾಣದ ಬಳಿ ಪೊಲೀಸರು ಮಕ್ಕಳನ್ನು ವಶಕ್ಕೆ ಪಡೆದಿದ್ದು, ಮಕ್ಕಳ ಸಂಪೂರ್ಣ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಮಕ್ಕಳೆಲ್ಲರೂ ಬಿಹಾರದವರಾಗಿದ್ದಾರೆ. ಅವರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಬಳಿ ಇರುವ ಮದರಸಕ್ಕೆ ಕರೆದುಕೊಂಡು ಹೋಗುತ್ತಿರುವುದಾಗಿ ಮಾಹಿತಿ ಲಭ್ಯವಾಗಿದ್ದು, ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

20 ದಿನಗಳ ಹಿಂದೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಮಕ್ಕಳನ್ನು ಕರೆದುಕೊಂಡು ಹೋದ ವಿಷಯವು ಸಂದೇಹದ ಮೊನೆಯಿಂದ ನೋಡಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ. ಸಾಮಾನ್ಯವಾಗಿ ಅನಾಥ ಮಕ್ಕಳನ್ನು ಮದರಸಾದಲ್ಲಿ ಉಳಿಸಿಕೊಂಡು, ಲುಕಿಕ ಮತ್ತು ಧಾರ್ಮಿಕ ಶಿಕ್ಷಣ ನೀಡುವ ಪರಿಪಾಠ ಮುಸ್ಲಿಂ ಸಮುದಾಯದಲ್ಲಿದೆ.

ಸದ್ಯ ಬಂಗಾರಪೇಟೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.