ಕೋಲ್ಕತ್ತಾದಲ್ಲಿ ಭೀಕರ ಅಗ್ನಿ ದುರಂತ: ನಾಲ್ವರು ಅಗ್ನಿಶಾಮಕ ಸಿಬ್ಬಂದಿ ಸಹಿತ ಏಳು ಮಂದಿಯ ದುರ್ಮರಣ

0
466

ಸನ್ಮಾರ್ಗ ವಾರ್ತೆ

ಕೋಲ್ಕತಾ: ಕೇಂದ್ರ ಕೋಲ್ಕತ್ತಾದ ಸ್ಟ್ರಾಂಡ್ ರಸ್ತೆಯಲ್ಲಿರುವ ಕಚೇರಿಯೊಂದರ ಕಟ್ಟಡದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತಪಟ್ಟವರಲ್ಲಿ ನಾಲ್ವರು ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಅಧಿಕಾರಿ, ರೈಲ್ವೆ ಅಧಿಕಾರಿ ಮತ್ತು ಭದ್ರತಾ ವ್ಯಕ್ತಿ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ಇತರ ಇಬ್ಬರು ನಾಪತ್ತೆಯಾಗಿದ್ದು, ಅವರಿಗಾಗಿ ಅಗ್ನಿಶಾಮಕ ಸಿಬ್ಬಂದಿಯವರು ಹುಡುಕುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಏಳು ಶವಗಳಲ್ಲಿ ಐದು ಶವಗಳು 12 ನೇ ಮಹಡಿಯಲ್ಲಿರುವ ಲಿಫ್ಟ್‌ನಲ್ಲಿ ಪತ್ತೆಯಾಗಿವೆ. ಲಿಫ್ಟ್ ಒಳಗೆ ಉಸಿರುಗಟ್ಟಿ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡದ 13 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮೃತಪಟ್ಟವರು ಮೃತದೇಹವು 12 ಮಹಡಿಯಲ್ಲಿ ದೊರಕಿರುವುದಾಗಿ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ. ಈ ಘಟನೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ‌ ಕಟ್ಟಡವು ರೈಲ್ವೆ ಇಲಾಖೆಗೆ ಸೇರಿದ್ದು, ಆದರೆ ಕಟ್ಟಡದ ನಕ್ಷೆಯನ್ನು ಒದಗಿಸಲು ಅವರಿಗೆ ಸಾಧ್ಯವಾಗಲಿಲ್ಲ. ದುರಂತದ ಬಗ್ಗೆ ನಾನು ರಾಜಕೀಯ ಮಾಡಲು ಬಯಸುವುದಿಲ್ಲ. ಆದರೆ ರೈಲ್ವೆಯಿಂದ ಯಾರೂ ಇಲ್ಲಿಗೆ ಬಂದಿಲ್ಲ ಎಂದು ಅವರ ಭೇಟಿಯ ವೇಳೆ ಯಾವ ರೈಲ್ವೆ ಇಲಾಖೆಯ ಅಧಿಕಾರಿಗಳು ಇಲ್ಲದ್ದರಿಂದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ಘಟನೆ ದುರದೃಷ್ಟಕರ. ಅಗ್ನಿ ಅಪಘಾತದ ಸಂದರ್ಭದಲ್ಲಿ ರೈಲ್ವೆ ಇಲಾಖೆ ರಾಜ್ಯ ಸರ್ಕಾರಕ್ಕೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಿದೆ. ರೈಲ್ವೆ ಇಲಾಖೆಯ ನಾಲ್ಕು ಪ್ರಧಾನ ಮುಖ್ಯಸ್ಥರನ್ನು ಒಳಗೊಂಡ ಉನ್ನತ ಮಟ್ಟದ ವಿಚಾರಣೆಗೆ ಬೆಂಕಿಯ ಕಾರಣವನ್ನು ಕಂಡುಹಿಡಿಯಲು ಆದೇಶಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಈ ಮಧ್ಯೆ ಹೇಳಿದ್ದಾರೆ.