ಕೆ.ಎಸ್.ಆರ್.ಟಿ.ಸಿ : ಶಿಶಿಕ್ಷು ತರಬೇತಿಗೆ ಅರ್ಜಿ ಆಹ್ವಾನ

0
136

ಸನ್ಮಾರ್ಗ ವಾರ್ತೆ

ಮಂಗಳೂರು:- ಮಂಗಳೂರು ವಿಭಾಗದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಶಿಶಿಕ್ಷು ತರಬೇತಿ ಪಡೆಯಲುಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ ಅಥವಾ ಐಟಿಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್, ಡೀಸೆಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಪ್ರೋಗ್ರಾಮಿಂಗ್& ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿಯನ್ನು ಜುಲೈ 20 ರೊಳಗೆ ವಿಭಾಗಿಯ ಕಚೇರಿ, ಕೆ.ಎಸ್.ಆರ್.ಟಿ.ಸಿ, ಮಂಗಳೂರು ವಿಭಾಗ, ಬಿಜೈ ಇಲ್ಲಿಗೆ ಸಲ್ಲಿಸಬೇಕು.

ಜುಲೈ 25ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗುವಂತೆ ನಿಗಮದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.