ಸನ್ಮಾರ್ಗ ವಾರ್ತೆ
ಬೆಂಗಳೂರು: ಮಹಿಳೆಯರ ಬಗ್ಗೆ ತಾತ್ಸಾರವಾಗಿ ಮಾತನಾಡಿದ ಕುಮಾರಸ್ವಾಮಿಯವರ ನಡೆ ಖಂಡನೀಯ. ಬಿಜೆಪಿ ಜೊತೆಗೆ ಕೈ ಜೋಡಿಸಿದ ಕೂಡಲೇ ಮಹಿಳೆಯರ ಬಗ್ಗೆ ಕೆಟ್ಟ ರೀತಿಯಲ್ಲಿ ಮಾತನಾಡ ತೊಡಗಿದ್ದಾರೆ. ಇದನ್ನು ನಾಡಿನ ಜನತೆ ಖಂಡಿಸಬೇಕು’ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯದ ಅಧ್ಯಕ್ಷ ಅಡ್ವಕೇಟ್ ತಾಹೇರ್ ಹುಸೇನ್ ಹೇಳಿದ್ದಾರೆ.
ಅವರು ಮಾತನಾಡುತ್ತಾ’ ತುಮಕೂರಿನ ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರ ಪ್ರಚಾರ ಮಾಡುತ್ತಾ ಕಾಂಗ್ರೆಸ್ ನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಗ್ಯಾರಂಟಿಯಿಂದ ಹಳ್ಳಿ ಹೆಣ್ಮಕ್ಕಳು ದಾರಿಗೆಟ್ಟಿದ್ದಾರೆ ಎಂದು ಹೇಳಿಕೊಂಡು ಮತ ಗಿಟ್ಟಿಸುವ ಪ್ರಯತ್ನ ಮಾಡುತ್ತಿದ್ದಾರೆ. ತೆನೆ ಹೊತ್ತ ಮಹಿಳೆ ಕೇವಲ ಚಿಹ್ನೆ ಎಂದು ಭಾವಿಸಿ ಈ ತರಹದ ಮಾತುಗಳ ನಿಜವಾಗಿ ಈ ರೀತಿಯ ಪ್ರಚಾರಗಳು ಅವರ ಪಕ್ಷಕ್ಕೆ ಮಾರಕ.
ಎಚ್ಚರಿಕೆಯಿಂದ ಮಾತನಾಡಬೇಕು. ಮಹಿಳಾ ಮತದಾರರ ಬಗ್ಗೆ ಕುಮಾರಸ್ವಾಮಿಯವರಿಗೆ ಗೌರವವಿರಲಿ. ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ಇಂತಹ ಮಾತುಗಳು ಶೋಭೆ ತರದು ಎಂದು ಅವರು ಹೇಳಿದರು.












