ಕುಂಭಮೇಳ ಕಾಲ್ತುಳಿತ: ಶೋಕ ವ್ಯಕ್ತಪಡಿಸಿದ ಜಮಾಅತೆ ಇಸ್ಲಾಮಿ ಹಿಂದ್

0
539

ಸನ್ಮಾರ್ಗ ವಾರ್ತೆ

ಕುಂಭಮೇಳದಲ್ಲಿ ಉಂಟಾದ ಸಾವು ನೋವಿಗೆ ಜಮಾಅತೆ ಇಸ್ಲಾಮಿ ಹಿಂದ್ ತೀವ್ರ ದುಃಖ ವ್ಯಕ್ತಪಡಿಸಿದೆ.

ಮಹಾ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ಥಾನ ಮಾಡುವ ವೇಳೆ ದುರಂತ ಸಂಭವಿಸಿದೆ ಮತ್ತು ಅಮಾಯಕರು ಬಲಿಯಾಗಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ನಾನು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಅಖಿಲ ಭಾರತ ಉಪಾಧ್ಯಕ್ಷ ಪ್ರೊ. ಸಲೀಮ್ ಇಂಜಿನಿಯರ್ ಹೇಳಿದ್ದಾರೆ.

ಈ ಕಾಲ್ತುಳಿತವು ಇಂತಹ ಕಾರ್ಯಕ್ರಮವನ್ನು ಏರ್ಪಡಿಸುವಲ್ಲಿ ನಮ್ಮ ಸರಕಾರದ ವೈಫಲ್ಯವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. ಭಕ್ತರ ಸುರಕ್ಷಿತತೆಗೆ ಮೊದಲ ಪ್ರಾಶಸ್ತ್ಯವನ್ನು ನೀಡಬೇಕಾಗಿದೆ. ಜನಸಾಮಾನ್ಯರ ಸುರಕ್ಷಿತತೆಯನ್ನು ಖಚಿತಪಡಿಸಬೇಕಾದದ್ದು ಸರಕಾರದ ಹೊಣೆಗಾರಿಕೆಯಾಗಿದೆ ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ಕಠಿಣ ಎಚ್ಚರಿಕೆಯನ್ನು ನೀಡಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ವಿಐಪಿಗಳಿಗೆ ಆದ್ಯತೆಯನ್ನು ನೀಡುವ ಮತ್ತು ಜನಸಾಮಾನ್ಯರನ್ನು ಕಡೆಗಣಿಸುವ ವ್ಯವಸ್ಥೆ ಬದಲಾಗಬೇಕಾಗಿದೆ. ಜನಸಾಮಾನ್ಯರಿಗೂ ಮಹತ್ವವನ್ನು ನೀಡುವ ಬಗ್ಗೆ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಖಚಿತತೆಯನ್ನು ವ್ಯಕ್ತಪಡಿಸಬೇಕಾಗಿದೆ ಎಂದವರು ಹೇಳಿದ್ದಾರೆ.