ಮಡಿಕೇರಿ: ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

0
163

ಸನ್ಮಾರ್ಗ ವಾರ್ತೆ

ಮಡಿಕೇರಿ: ಸ್ಥಳೀಯ ಸಂಸ್ಥೆಗಳ ಹೊರ ಗುತ್ತಿಗೆ ನೌಕರರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘ ಪ್ರತಿಭಟನೆ ನಡೆಸುತ್ತಿದೆ. ನೀರು ಸರಬರಾಜುದಾರರು, ಡಾಟಾ ಆಪರೇಟರ್‍‌ಗಳು ಹಾಗೂ ವಾಹನ ಚಾಲಕರು ತಮ್ಮ ಕೆಲಸವನ್ನು ಸ್ಥಗಿತಗೊಳಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಅದರ ಭಾಗವಾಗಿ ಮಡಿಕೇರಿ ನಗರಸಭೆಯ ಎದುರು ಮೌನ ಪ್ರತಿಭಟನೆ ನಡೆಯಿತು.

ರಾಜ್ಯ ಸರ್ಕಾರ ಹೊರಗುತ್ತಿಗೆ ನೌಕರರನ್ನು ಮಲತಾಯಿ ಧೋರಣೆಯಿಂದ ನೋಡುತ್ತಿದೆ ಎಂದು ನೌಕರರು ಆರೋಪಿಸಿದರು. ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಪಾವತಿಗೊಳಪಡಿಸುವಂತೆ ಒತ್ತಾಯಿಸಿದರು. ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಡಿ.ಡಿ.ಈರಪ್ಪ, ಉಪಾಧ್ಯಕ್ಷ ಎ.ಎ.ಬೋಪಣ್ಣ, ಕಾರ್ಯದರ್ಶಿ ಟಿ.ಬಿ.ರಮೇಶ್ ಕುಟ್ಟಪ್ಪ, ಖಜಾಂಚಿ ಎಂ.ಎ.ಕಬೀರ್ ಅಹಮ್ಮದ್ ಹಾಗೂ ಸಂಚಾಲಕ ಕೆ.ಎಸ್.ಮಹದೇವಪ್ಪ ಸೇರಿದಂತೆ ಮತ್ತಿತರ ನೌಕರರು ಪಾಲ್ಗೊಂಡಿದ್ದರು.