ಹೈದರಾಬಾದ್: ಮಳೆ ನೀರಿನಲ್ಲಿ ಕೊಚ್ಚಿಹೋಗುತ್ತಿರುವ ವ್ಯಕ್ತಿಯನ್ನು ರಕ್ಷಿಸಲು ಹರಸಾಹಸ ಪಡುತ್ತಿರುವ ನಾಗರಿಕರು: ವಿಡಿಯೋ ವೈರಲ್

0
789

ಸನ್ಮಾರ್ಗ ವಾರ್ತೆ

ಹೈದರಾಬಾದ್,ಅ.14: ಕಳೆದ ಮೂರು ದಿನಗಳಿಂದ ಹೈದರಾಬಾದಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆ ನೀರಿನಲ್ಲಿ ಒಬ್ಬರು ಕೊಚ್ಚಿಹೋಗುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ರಸ್ತೆಯಲ್ಲಿ ಮಳೆ ನೀರು ಪ್ರವಾಹೋಪಾದಿಯಲ್ಲಿ ಹರಿದು ಬರುತ್ತಿರುವಾಗ ವ್ಯಕ್ತಿಯೊಬ್ಬರು ಕೊಚ್ಚಿಕೊಂಡು ಹೋಗುವುದು ಮತ್ತು ಕಟ್ಟಡದಲ್ಲಿರುವ ನಾಗರಿಕರು ಅವರ ಕಡೆಗೆ ಹಗ್ಗ ಮತ್ತು ಟಯರನ್ನು ಎಸೆದು ರಕ್ಷಿಸಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿದೆ. ಆದರೆ ಅವರನ್ನು ರಕ್ಷಿಸಲು ಈ ಪ್ರಯತ್ನಗಳಿಂದ ಸಾಧ್ಯವಾಗಿಲ್ಲ.

ಇದೇ ವೇಳೆ ಪ್ರವಾಹಕ್ಕೆ ಸಿಲುಕಿದ ಕಾರು ಮತ್ತಿತರ ವಾಹನಗಳು ಕೂಡ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯಗಳು ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.