ಮಂಡ್ಯ | ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ; ಬಿಜೆಪಿ ಕಾರ್ಯಕರ್ತನ ಬಂಧನ

0
514

ಸನ್ಮಾರ್ಗ ವಾರ್ತೆ

2022ರ ಡಿಸೆಂಬರ್ 18ರಂದು ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತ ಡಣಾಯಕನಪುರದ ರವಿ ಅಲಿಯಾಸ್ ಬುಲೆಟ್ ರವಿ ಎಂಬಾತನನ್ನು ಮಂಡ್ಯ ಪಶ್ಚಿಮ ಠಾಣೆಯ ಪೋಲಿಸರು ಬಂಧಿಸಿದ್ದಾರೆ.

ಸೋಮವಾರ ರಾತ್ರಿ ಬಿಜೆಪಿ ಕಾರ್ಯಕರ್ತ ರವಿಯನ್ನು ಬಂಧಿಸಿರುವ ಪೋಲಿಸರು ಮಂಗಳವಾರ ಬೆಳಿಗ್ಗೆ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮಂಡ್ಯದ ಸಂಜಯ ವೃತ್ತದಲ್ಲಿ 2022 ಡಿಸೆಂಬರ್ 18 ರಂದು ಮೋದಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಪಾಕ್ ವಿದೇಶಾಂಗ ಸಚಿವನ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪಾಕಿಸ್ತಾನ್ ಮುರ್ದಾಬಾದ್, ಹಿಂದೂಸ್ತಾನ್ ಜಿಂದಾಬಾದ್‌ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರು. ಘೋಷಣೆ ಕೂಗುವಾಗ ‘ಪಾಕಿಸ್ತಾನ್ ಜಿಂದಾಬಾದ್’ ಎಂದೂ ಘೋಷಣೆ ಕೂಗಿದ್ದರು.

ಇತ್ತೀಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಬೃಹತ್ ಧರಣಿ ನಡೆಸಿದ್ದ ಅತಿಥಿ ಉಪನ್ಯಾಸಕರು, ಖಾಯಂಗೊಳಿಸಲು ಬೇಡಿಕೆ ಇರಿಸಿದ್ದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ನಿಯೋಗದೊಂದಿಗೆ ಸಭೆ ನಡೆಸಿ, “ಸೇವಾ ಭದ್ರತೆ ನೀಡಲು ಕಾನೂನು ತೊಡಕುಗಳಿರುವುದರಿಂದ ಸಾಧ್ಯವಾಗುವುದಿಲ್ಲ. ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿದೆ” ಎಂದು ನಿಯೋಗಕ್ಕೆ ತಿಳಿಸಿದ್ದಲ್ಲದೇ, ಮುಷ್ಕರ ಹಿಂಪಡೆದು ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದರು.