ಸನ್ಮಾರ್ಗ ವಾರ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.
ಆದಿ ಲಕ್ಷ್ಮಿ ಕಂಪನಿಗೆ ಸೇರಿರುವ ನವದುರ್ಗಾ ಎಂಬ ಹೆಸರಿನ ಬಸ್ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಬಸ್ಸಿನಲ್ಲಿ 40ರಿಂದ 50 ರಷ್ಟು ಪ್ರಯಾಣಿಕರು ಇದ್ದರು ಎಂದು ವರದಿಯಾಗಿದೆ.
ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿಯ ಸುಮಾರು 100 ಮೀ ಸಾಗುವಾಗಲೇ ಈ ಅವಘಡ ಸಂಭವಿಸಿದೆ. ಬಸ್ಸು ಕೈಕಂಬದಿಂದ ಬಿ ಸಿ ರೋಡ್ ಕಡೆಗೆ ತೆರಳುತ್ತಿತ್ತು ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.












