ಮಂಗಳೂರು: ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಪ್ರಮಾಣ ಪತ್ರ ವಿತರಣೆ

0
289

ಸನ್ಮಾರ್ಗ ವಾರ್ತೆ

ಮಂಗಳೂರು: ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮವು ಜೂನ್ 27 ರಂದು ಶನಿವಾರ ಹಿದಾಯತ್ ಸೆಂಟರ್ ನಲ್ಲಿ ಜರುಗಿತು.

ಮುಖ್ಯ ಅತಿಥಿಯಾಗಿ ಮೂಡಬಿದಿರಿ ಅಲ್ ಇಸ್ಲಾಹ್ ಇಸ್ಲಾಮಿಕ್ ಕಾಲೇಜಿನ ಚೇರ್ಮನ್ ಝಾಹಿದ್ ಹುಸೈನ್ ಭಾಗವಹಿಸಿದ್ದರು.

ಜಮಾಅತೆ ಇಸ್ಲಾಮೀ ಹಿಂದ್ ಮಂಗಳೂರು ನಗರಾಧ್ಯಕ್ಷರಾದ ಕೆ.ಎಮ್. ಅಶ್ರಫ್ ಅಧ್ಯಕ್ಷತೆ ವಹಿಸಿದ್ದರು.

ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶನ್ ಕರ್ನಾಟಕ 2025- 26 ನೇ ಸಾಲಿನಲ್ಲಿ ಆಯೋಜಿಸಿದ್ದ ಪರೀಕ್ಷೆಯಲ್ಲಿ ಉತ್ತಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಆರಂಭದಲ್ಲಿ ಮುಂತಹ ಹಮೀದಾ ಕುರ್ ಆನ್ ಪಠಿಸಿದರು. ಬೋರ್ಡ್ ಆಫ್ ಇಸ್ಲಾಮಿಕ್ ಎಜ್ಯುಕೇಶನ್ ಮಂಗಳೂರು ಸಂಚಾಲಕರಾದ ಮುಹಮ್ಮದ್ ಹನೀಫ್ ಮಾಸ್ಟರ್ ಪ್ರಾಸ್ತಾವಿಕ ಹಾಗೂ ಸ್ವಾಗತ ಭಾಷಣ ಮಾಡಿದರು. ಕೊನೆಯಲ್ಲಿ ರಹ್ಮತುಲ್ಲಾ ಮಾಸ್ಟರ್ ಧನ್ಯವಾದ ಅರ್ಪಿಸಿದರು. ಕಾಸಿಮ್ ಕೆ.ಎಮ್ ಕಾರ್ಯಕ್ರಮ ನಿರೂಪಿಸಿದರು.