ಸನ್ಮಾರ್ಗ ವಾರ್ತೆ
ಕಡಬ: ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡ ನಿವೃತ್ತ ಸೈನಿಕರೋರ್ವರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿವೃತ್ತ ಸೈನಿಕ ಗಂಗಾಧರ ಗೌಡ ಮೃತಪಟ್ಟವರು. ಕುಟ್ರುಪಾಡಿ ಗ್ರಾಮ ಪಂಚಾಯತ್ ವತಿಯಿಂದ ಹಳೆ ಸ್ಟೇಷನ್ ಅಮೃತ ಸರೋವರದ ಬಳಿ ನಿವೃತ್ತ ಸೈನಿಕ ಗಂಗಾಧರ ಗೌಡ ಅವರು ಧ್ವಜ ವಂದನೆಯ ಮಾಹಿತಿ ನೀಡಿ ಧ್ವಜಾರೋಹಣಕ್ಕೆ ಸಿದ್ಧವಾಗುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.












